ದೇಶಿಯ ಕ್ರೀಡೆಗಳ ಉಳಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ

SOR WEENNNNNN
Published on

ಸೊರಬ: ದೇಶಿಯ ಕ್ರೀಡೆಗಳನ್ನು ಉಳಿಸಿ, ಬೆಳೆಸಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ನಿಸರಾಣಿ ಗ್ರಾಪಂ ಅಧ್ಯಕ್ಷ ಬಿ.ಕುಮಾರ್ ಹೇಳಿದರು.

ಶನಿವಾರ ತಾಲೂಕಿನ ನಿಸರಾಣಿ ಗ್ರಾಮದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಸಾಂಪ್ರದಾಯಿಕ ಕ್ರೀಡೆಗಳು ಮನರಂಜನೆ ನೀಡುವ ಜತೆಗೆ ಪರಸ್ಪರ ಸ್ನೇಹ ಹಾಗೂ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಪೂರಕವಾಗಿವೆ. ಯುವಕರು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿದರು.

ಇಂದು ಯುವ ಜನತೆ ಮೊಬೈಲ್ ಮತ್ತಿತರ ತಂತ್ರಜ್ಞಾನಕ್ಕೆ ಮಾರುಹೋಗಿ ಗ್ರಾಮೀಣ ಕ್ರೀಡೆಗಳನ್ನು ಮರೆಯುತ್ತಿದ್ದಾರೆ. ಸರ್ಕಾರ ಈ ದಿಸೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಎಲ್ಲ ವಯಸ್ಕರಿಗೂ ಕ್ರೀಡಾಕೂಟಗಳನ್ನು ಏರ್ಪಡಿಸುವ ಮೂಲಕ ದೇಶಿಯ ಕ್ರೀಡೆಗಳನ್ನು ಉಳಿಸುವತ್ತ ಚಿಂತನೆ ನಡೆಸುತ್ತಿರುವುದು ಉತ್ತಮ ಬೆಳವಣಿಗೆ. ಗ್ರಾಮೀಣ ಜನರು ಕೃಷಿ ಮತ್ತಿತರ ಚಟುವಟಿಕೆಗಳಲ್ಲಿ ತೊಗಿಸಿಕೊಂಡರೂ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರೋತ್ಸಾಹ ನೀಡುತ್ತಿರುವುದು ಸಂತಸದ ವಿಷಯ ಎಂದು ತಿಳಿಸಿದರು.

ಕಬಡ್ಡಿ, ಗುಂಡು ಎಸೆತ, 100 ಮೀ. ಓಟ ಹಾಗೂ ಮಹಿಳೆಯರಿಗಾಗಿ ಹಗ್ಗ-ಜಗ್ಗಾಟ ಸ್ಪರ್ಧೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net