ದೇಸಿ ಉತ್ಪನ್ನಗಳ ಖರೀದಿಗೆ ಆದ್ಯತೆ ಕೊಡಿ -ಸಂಸದ ಸಿದ್ದೇಶ್ವರ ಸಲಹೆ

DVG-MP-9.jpg
Published on

ದಾವಣಗೆರೆ: ದೀಪಾವಳಿ ಹಬ್ಬದಲ್ಲಿ ವಸ್ತುಗಳನ್ನು ಖರೀದಿಸುವಾಗ ದೇಸಿ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು. ಗ್ರಾಹಕರ ಒಂದೊಂದು ಖರೀದಿಯೂ ದೇಸಿ ಉತ್ಪಾದಕರ ಬಾಳಲ್ಲಿ ಬೆಳಕು ತರಲಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ನಗರದಲ್ಲಿ ಗುರುವಾರ ಗುಂಡಿ ಮಹದೇವಪ್ಪ ವೃತ್ತದಲ್ಲಿ ಬೀದಿಬದಿ ವ್ಯಾಪಾರಿಗಳು ಹಾಗೂ ಅಶೋಕ ರಸ್ತೆಯ ಜನತಾ ಖಾದಿ ಭಂಡಾರದಲ್ಲಿ ಸ್ಥಳೀಯರು ತಯಾರಿಸಿದ ವಸ್ತುಗಳನ್ನು ಖರೀದಿಸುವ ಮೂಲಕ ಉತ್ಪಾದಕರನ್ನು ಪ್ರೋತ್ಸಾಹಿಸಿ ಮಾತನಾಡಿದರು.

ಭಾರತೀಯರು ಸ್ಥಳೀಯ ಉತ್ಪನ್ನ ಬಳಸಬೇಕು ಮತ್ತು ಪ್ರೋತ್ಸಾಹಿಸಬೇಕು. ಇದು ಸ್ವಾವಲಂಬಿ ಭಾರತದ ಕನಸು ಮತ್ತು ಗುರಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರ ಕನಸನ್ನು ನಾವೆಲ್ಲರೂ ನನಸು ಮಾಡಬೇಕಿದೆ ಎಂದು ತಿಳಿಸಿದರು.

ಭಾರತ ಆತ್ಮನಿರ್ಭರ ದೇಶವಾಗಬೇಕು ಎಂಬುದನ್ನು ನನಸು ಮಾಡಲು ಕೇಂದ್ರ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿದೆ. ಸ್ವಾವಲಂಬನೆ ದೇಶದ ತುರ್ತು ಅಗತ್ಯವಾಗಿದ್ದು, ಇದಕ್ಕಾಗಿ ವೋಕಲ್ ಫಾರ್ ಲೋಕಲ್ ಯೋಜನೆಯ ಮಂತ್ರವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ವಾಸನ ಬಸವರಾಜ್ ಇತರರು ಇದ್ದರು.

---

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net