

ಹಿರೀಸಾವೆ: ದೇಸಿ ಸಂಸ್ಕೃತಿಯನ್ನು ಸದಾಕಾಲ ಗೌರವಿಸಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ 2024-25ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಹಾಗೂ ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಸಹಯೋಗದಲ್ಲಿ ಏರ್ಪಡಿಸಿದ್ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣದ ಜತೆಗೆ ಸಾಂಸ್ಕೃತಿಕ ಚಟುವಟಿಕೆಗೂ ವಿದ್ಯಾರ್ಥಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ದೇಸಿ ಕಲೆ ಹಾಗೂ ಸಂಸ್ಕೃತಿಯನ್ನು ಮರೆತರೆ ನಮ್ಮನ್ನು ನಾವೇ ಮರೆತಂತೆ. ಕ್ರೀಡೆಗಳಿಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ನೀಡಬೇಕು. ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡರೆ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ. ಓದಿನ ಕಡೆಗೂ ಗಮನಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸಾಂಸ್ಕೃತಿಕ ಮತ್ತು ಕ್ರೀಡಾ ವಿಭಾಗದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಪ್ರಾಂಶುಪಾಲ ಬಿ.ಎಚ್.ಲಕ್ಷ್ಮಣ್‌ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶ್ರೀಸಿದ್ದಲಿಂಗೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಆರ್.ಗೋವಿಂದರಾಜು, ಉಪನ್ಯಾಸಕರಾದ ಆನಂದ್, ಮಂಜುನಾಥ್, ಕುಮಾರ್ ಇತರರಿದ್ದರು.