

ಕೊಳ್ಳೇಗಾಲ : ಕ್ರೀಡೆಯಲ್ಲಿ ಗಣನೀಯ ಸಾಧನೆ ಮಾಡಿದರೆ ಕ್ರೀಡಾ ಕೋಟಾದಲ್ಲಿ ಉದ್ಯೋಗ ಹಾಗೂ ಉನ್ನತ ವ್ಯಾಸಂಗ ಅವಕಾಶಗಳು ದೊರೆಯಲಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ), ಕೊಳ್ಳೇಗಾಲ ಕಾರ್ನರ್ ಸ್ಟೋನ್ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಿದ್ದ ಚಾಮರಾಜನಗರ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಏಷ್ಯನ್ ಮತ್ತು ಒಲಿಂಪಿಕ್ ಕ್ರೀಡಾಕೂಟದಲ್ಲಿ ನಮ್ಮ ದೇಶದ ಕ್ರೀಡಾಪಟುಗಳು ಗೆಲುವು ಸಾಧಿಸಿ ಸಾಧನೆ ಮಾಡುತ್ತಿದ್ದಾರೆ. ಚಿನ್ನ, ಬೆಳ್ಳಿ, ಕಂಚು ಪದಕಗಳನ್ನು ಗೆಲ್ಲುತ್ತಿದ್ದಾರೆ. ಇವೆಲ್ಲವನ್ನು ಮಕ್ಕಳು ಪ್ರೇರಣೆಯಾಗಿ ಪಡೆಯಬೇಕು. ಪಠ್ಯದ ಜತೆ ಕ್ರೀಡೆಯಲ್ಲೂ ಭಾಗವಹಿಸಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಕ್ರೀಡೆಗೂ ಆದ್ಯತೆ ನೀಡಬೇಕು ಎಂದರು.
ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಸುರೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರು, ತಾಲೂಕು ಅಧ್ಯಕ್ಷ ರಾಜೇಂದ್ರ ಮೋಳೆ, ಜಿ.ಪಂ. ಉಪಕಾರ್ಯದರ್ಶಿ ಶ್ರುತಿ, ತಾ.ಪಂ. ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಪ್ರಾಂಶುಪಾಲರ ಸಂಘದ ಜಿಲ್ಲಾ ಅಧ್ಯಕ್ಷ ಪ್ರಿಯಶಂಕರ್, ಕಾರ್ನರ್ ಸ್ಟೋನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರೂಬೆನ್ ಮೋಸೆಸ್, ಪ್ರಾಂಶುಪಾಲ ಡಾ.ರೋಷನ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೋಸೆಫ್ ಅಲೆಕ್ಸಾಂಡರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್ ಮತ್ತಿತರಿದ್ದರು.