ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ

yoga nadige--008
Published on

ಚಿತ್ರದುರ್ಗ: ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ. ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಯೋಗ ನಡಿಗೆಗೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್. ನಾಗಸಮುದ್ರ ಮಾತನಾಡಿ, ಜೂ. 21ರಂದು 10ನೇ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ 2 ಸಾವಿರಕ್ಕೂ ಹೆಚ್ಚು ಯೋಗಾಸಕ್ತರು ಭಾಗವಹಿಸಲಿದ್ದಾರೆ ಎಂದರು.
ಡಿಸಿ ಕಚೇರಿಯಿಂದ ಆರಂಭವಾದ ನಡಿಗೆ ರಂಗಯ್ಯನ ಬಾಗಿಲು, ಉಚ್ಚಂಗಿಯಲ್ಲಮ್ಮ ದೇಗುಲ, ಗಾಂಧಿವೃತ್ತ, ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಮಾಪನಗೊಂಡಿತು.
ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳು, ಸಿಬ್ಬಂದಿ, ಜಿಲ್ಲೆಯ ಎಲ್ಲ ಯೋಗ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಅಮೃತ ಆಯುರ್ವೇದ ಮಹಾವಿದ್ಯಾಲಯದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ, ಯೋಗ ಸಂಸ್ಥೆಗಳ ಸದಸ್ಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net