

ಕಲಬುರಗಿ: ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅಗತ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಬೇಕು ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಹೇಳಿದರು.
ಪಿಡಿಎ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕೇಂದ್ರ ಸಂವಹನ ಇಲಾಖೆ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ, ಪತಂಜಲಿ ಯೋಗ ಸಮಿತಿ ಮಹಿಳಾ ಘಟಕ ಹಾಗೂ ಭಾರತ ಸೇವಾದಳ ಜಿಲ್ಲಾ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟಿçÃಯ ಯೋಗ ದಿನಾಚರಣೆಯಲ್ಲಿ ಮಾತನಾಡಿ, ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಶ್ರೇಷ್ಠ ದೇಶ ಭಾರತವಾಗಿದೆ. ಇದೀಗ ನಾವೆಲ್ಲರೂ ಯೋಗ ದಿನದಲ್ಲಿ ದಶಮಾನೋತ್ಸವ ಸಂಭ್ರಮದಲ್ಲಿz್ದÉÃವೆ. ದೇಶದಲ್ಲಿ ೫೦೦೦ ವಷÀðದ ಹಿಂದೆಯೇ ಯೋಗ ಪದ್ಧತಿ ರೂಢಿಯಲ್ಲಿತ್ತು. ಇಂದು ಭಾರತ ಮಾತ್ರವಲ್ಲದೇ ವಿಶ್ವವ್ಯಾಪಿ ಜನರು ಯೋಗ ಮೈಗೂಡಿಸಿಕೊಂಡಿದ್ದಾರೆ ಎಂದರು.
ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಸಹಾಯಕ ನಾಗಪ್ಪ ಅಂಬಾಗೋಳ, ಭಾರತ ಸೇವಾದಳ ಜಿಲ್ಲಾ ಸಂಘಟಕ ಚಂದ್ರಶೇಖರ ಜಮಾದಾರ, ಪತಂಜಲಿ ಯೋಗ ಸಮಿತಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಮಂಗಲಾ ಚಕ್ರವರ್ತಿ, ಭಾರತ ಸೇವಾದಳ ಜಿಲ್ಲಾ ಸಮಿತಿ ಕಾರ್ಯದರ್ಶಿ ಸುರೇಶ ಬಡಿಗೇರ್, ಕೋಶಾಧ್ಯಕ್ಷ ಅಬ್ದುಲ್ ರೆಹಮಾನ್ ಪಟೇಲ್, ಸದಸ್ಯರಾದ ಲಕ್ಷಿö್ಮÃಕಾಂತ ರಾಖಾ, ಶಿವಶರಣಪ್ಪ ಜಮಾದಾರ, ಪ್ರಮುಖರಾದ ಉದಯಕುಮಾರ ಚಿಂಚೋಳಿ, ಡಾ.ಶರಣಬಸಪ್ಪ ಹರವಾಳ, ಡಾ.ಶಿವಾನಂದ ಮೇಳಕುಂದಿ, ಅನಿಲ್ ಮರಗೋಳ, ನಾಗಣ್ಣ ಗಂಟಿ, ಸಿ.ಸಿ.ಪಾಟೀಲ್ ಇತರರಿದ್ದರು.