

ಧಾರವಾಡ: ನವಲಗುಂದ ತಾಲೂಕಿನ ಶಿರೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ವಿಜಯಾ ಬೆಡಸೂರ ಅವರಿಗೆ ‘ಗ್ರಾಮೀಣ ಶಿಕ್ಷಕ ರತ್ನ’ ರಾಜ್ಯ ಪ್ರಶಸ್ತಿ ಲಭಿಸಿದೆ.
ವಿಜಯಾ ಬೆಡಸೂರ ಅವರು ಜಿಲ್ಲೆಯ ಗ್ರಾಮೀಣ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಕ್ರೀಡಾ ಆಸಕ್ತಿ ಮತ್ತು ಕೌಶಲ ಬೆಳೆಸಲು ನಿರಂತರ ಶ್ರಮಿಸಿರುವುದನ್ನು ಪರಿಗಣಿಸಿ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ‘ಗ್ರಾಮೀಣ ಶಿಕ್ಷಕ ರತ್ನ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಜರುಗಿದ ಶಿಕ್ಷಕರ ರಾಜ್ಯ ಸಮಾವೇಶದಲ್ಲಿ ಮಾಜಿ ಸಿ.ಎಂ. ಜಗದೀಶ ಶೆಟ್ಟರ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ.