

ಧಾರವಾಡ: ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಗೆ ದೈಹಿಕ ಆರೋಗ್ಯ ಬಹಳ ಮುಖ್ಯ. ದೈಹಿಕವಾಗಿ ಸದೃಢರಾಗಲು ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಕರ್ನಾಟಕ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಕೆ.ಬಿ.ಗುಡಸಿ ಹೇಳಿದರು.
ರಾಷ್ಟ್ರೀಯ ಕ್ರೀಡಾ ದಿನ ನಿಮಿತ್ತ ನಗರದ ಕರ್ನಾಟಕ ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಕ್ರೀಡಾ ಅಧ್ಯಯನ ವಿಭಾಗ ಕವಿವಿ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಮೇಜರ್ ಧ್ಯಾನ್‌ಚಂದ್ ಪಂದ್ಯಾವಳಿ (ವಾಲ್ಹಿಬಾಲ್ ಮತ್ತು ಥ್ರೋ ಬಾಲ್) ಉದ್ಘಾಟಿಸಿ ಅವರು ಮಾತನಾಡಿದರು.
ಪಠ್ಯದ ಜತೆಗೆ ಕ್ರೀಡೆಗಳಿಗೆ ವಿದ್ಯಾರ್ಥಿಗಳು ಹೆಚ್ಚು ಗಮನ ಕೊಡಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳು ಶಿಸ್ತು, ಬದ್ಧತೆ ಮತ್ತು ಛಲ ಬೆಳೆಸಿಕೊಳ್ಳಲು ಸಹಾಯವಾಗುತ್ತದೆ. ಜಗತ್ತಿನಲ್ಲಿ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಭವಿಷ್ಯದಲ್ಲಿ ಉತ್ತಮ ಕ್ರೀಡಾ ಪಟುಗಳನ್ನು ನಿರ್ಮಿಸುವಲ್ಲಿ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸಿವೆ ಎಂದರು.
ಪ್ರಭಾರ ಕುಲಸಚಿವ ಪ್ರೊ. ಬಿ.ಬಸವನಗೌಡ, ಕ್ರೀಡಾ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಬಿ.ಎಂ.ಪಾಟೀಲ, ಡಾ. ಸಂಜಕುಮಾರ ಮಾಲಗತ್ತಿ, ಕ್ರೀಡಾಪಟುಗಳು, ಇತರರು ಇದ್ದರು.