

ಕಲಬುರಗಿ: ವಿದ್ಯಾಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಮಹತ್ವ ನೀಡಬೇಕು. ಕ್ರೀಡಾಕೂಟದಲ್ಲಿ ಪ್ರತಿ ವಿದ್ಯಾರ್ಥಿ ಪಾಲ್ಗೊಂಡು ದೈಹಿಕ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಮುಖ್ಯಗುರು ರುದ್ರಯ್ಯ ಮಠಪತಿ ಹೇಳಿದರು.
ನಗರದ ಕೋಟನೂರ(ಡಿ)ಯ ಸಿದ್ಧಶ್ರೀ ಶಿP್ಷÀಣ ಸಂಸ್ಥೆಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ನಿಮಿತ್ತ ಗುರುವಾರ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾತನಾಡಿ, ಆಟದಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ ಎಂದರು.
ಸAಸ್ಥೆ ಉಪಾಧ್ಯಕ್ಷ ಬಸವರಾಜ ಹಿರೇಮಠ ಷಡಕ್ಷರಿ ಶ್ರೀ ಸಿದ್ಧರಾಮೇಶ್ವರ ಹಾಗೂ ಜವಾಹರಲಾಲ್ ನೆಹರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಮಕ್ಕಳಿಂದ ಕ್ರೀಡಾಜ್ಯೋತಿ ಸ್ವೀಕರಿಸಲಾಯಿತು. ಶಿP್ಷÀಕರಿಗೆ ಹಾಗೂ ಮಕ್ಕಳಿಗೆ ಕ್ರೀಡಾ ನಿಯಮಗಳ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಮ್ಯೂಸಿಕಲ್ ಚೇರ್, ಖೋ-ಖೋ, ಕಬ್ಬಡಿ, ರನ್ನಿಂಗ್ ರೇಸ್, ಕಪ್ಪೆ ಓಟ ಸೇರಿ ವಿವಿಧ ಸ್ಪರ್ಧೆಗಳು ನಡೆದವು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪೂರ್ಣಿಮಾ, ಕವಿತಾ, ಸವಿತಾ, ಶ್ರೀದೇವಿ, ಸುಹಾಸಿನಿ ಇತರರಿದ್ದರು. ಶಿಕ್ಷಕಿ ಅನಿತಾ ಸ್ವಾಗತಿಸಿದರು. ಶಿP್ಷÀಕಿ ಗಂಗಮ್ಮ ಪ್ರಾರ್ಥನಾ ಗೀತೆ ಹಾಡಿದರು. ಶಿಕ್ಷಕಿ ರಾಧಿಕಾ ಕುಲ್ಕರ್ಣಿ ಕ್ರೀಡಾಕೂಟದ ಮಾಹಿತಿ ನೀಡಿದರು. ಸುನಿತಾ ವಂದಿಸಿದರು.