ದೊಡ್ಡಬಳ್ಳಾಪುರದಲ್ಲಿ ವಳಗೆರೆದೊಡ್ಡಿ ಶಾಲೆ ವಿದ್ಯಾರ್ಥಿಗಳ ಸಾಧನೆ

05M.D.R.9
Published on

ಮದ್ದೂರು: ಭಾರತೀಯ ಸೇವಾದಳ ವತಿಯಿಂದ ದೊಡ್ಡಬಳ್ಳಾಪುರ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮೇಳದಲ್ಲಿ ತಾಲೂಕಿನ ವಳಗೆರೆದೊಡ್ಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನ ಗಳಿಸಿ ಗಮನ ಸೆಳೆದಿದ್ದಾರೆ.


ಪಥಸಂಚಲನ, ಬ್ಯಾಂಡ್‌ವಾದನ, ಸಾಂಸ್ಕೃತಿಕ ಕಾರ್ಯಕ್ರಮ, ಪಟಣ ಕುಣಿತ, ವೀರಗಾಸೆ ಮತ್ತು ತಮಟೆ ವಾದ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.


ಪೂಜಾ ಕುಣಿತದಲ್ಲಿ 150ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು, ಇದರಲ್ಲಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ತಂಡ ನಾಯಕತ್ವವನ್ನು ಟಿ.ಎಸ್.ಗಣೇಶ್ ವಹಿಸಿದ್ದರು.


ವಿದ್ಯಾರ್ಥಿಗಳ ಸಾಧನೆಯನ್ನು ಹರ್ಡೀಕರ್ ಶಾಖೆಯ ವಸಂತ್, ಮುಖ್ಯಶಿಕ್ಷಕ ಕೆ.ವಿ.ವೆಂಕಟರಮಣಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net