ದೊಡ್ಡಮ್ಮ ದೇವಸ್ಥಾನದಲ್ಲಿ ಚಂಡಿಕಾ ಹೋಮ

4ark1
Published on

ಅರಕಲಗೂಡು: ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಿ ಗ್ರಾಮದೇವತೆ ಶ್ರೀ ದೊಡ್ಡಮ್ಮ ದೇವಸ್ಥಾನದಲ್ಲಿ ಮಂಗಳವಾರ ಚಂಡಿಕಾ ಹೋಮ ನೆರವೇರಿಸಲಾಯಿತು.
ದೇವಸ್ಥಾನದಲ್ಲಿ ಬೆಳಗ್ಗೆ ದೇವರ ಮೂಲ ವಿಗ್ರಹಕ್ಕೆ ವಿಶೇಷ ಪೂಜೆ ಅಭಿಷೇಕ ಸಲ್ಲಿಸಿದ ನಂತರ ವಿಗ್ರಹಗಳನ್ನು ಹೊರತಂದು ಅಲಂಕರಿಸಿ ಧಾರ್ಮಿಕ ವಿಧಾನಗಳನ್ವಯ ಪಂಚಾಮೃತ ಅಭಿಷೇಕ ಸೇರಿದಂತೆ ಹಲವು ಪೂಜಾ ಕೈಂಕರ್ಯಗಳನ್ನು ವಿಧಿವತ್ತಾಗಿ ಪೂರೈಸಲಾಯಿತು. ಚಂಡಿಕಾ ಹೋಮ ಸಲ್ಲಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು.
ಅಪಾರ ಭಕ್ತರು ಪೂಜಾ ಕಾರ್ಯದಲ್ಲಿ ಭಾಗವಹಿಸಿ ದೇವಿ ಕೃಪೆಗೆ ಪಾತ್ರರಾದರು. ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net