ದೊರಗಲ್ಲು ಗ್ರಾಮದಲ್ಲಿ ಪೂಜೆ

Kpp shiva
Published on

ಕೊಪ್ಪ: ಹಿರೇಕೊಡಿಗೆ ಗ್ರಾಮ ಪಂಚಾಯಿತಿ ದೊರಗಲ್ಲು ಗ್ರಾಮದ ಮಲ್ಲಿಕಾರ್ಜುನ ಸನ್ನಿಧಿಯಲ್ಲಿ ಶಿವರಾತ್ರಿ ನಿಮಿತ್ತ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವರಿಗೆ ವಿಶೇಷ ಅಲಂಕಾರ, ರುದ್ರಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಯಿತು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಸಂಜೆ ಶ್ರೀ ವಿನಾಯಕ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ದೀಪೋತ್ಸವ, 8.30ರಿಂದ ಹಂಸಧ್ವನಿ ತಂಡದಿಂದ ಭಕ್ತಿ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಪಟ್ಟಣದ ವಾಟರ್‌ಟ್ಯಾಂಕ್ ವೃತದಲ್ಲಿರುವ ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನವನ್ನು ವಿದ್ಯುತ್ ದೀಪ, ತಳಿರು- ತೋರಣಗಳಿಂದ ಶೃಂಗರಿಸಲಾಗಿತ್ತು.

ಹರಿಹರಪುರ ಮಠ, ಶಕಟಪುರ ಮಠದಲ್ಲಿ ಶಿವರಾತ್ರಿ ವಿಶೇಷ ಪೂಜೆ ನೆರವೇರಿಸಲಾಯಿತು. ಕೊಪ್ಪ ವೀರಭದ್ರ ದೇವಸ್ಥಾನ, ಬಾಳಗಡಿಯ ನಾಗ ದೇವತಾ ಸನ್ನಿಧಿ, ನೇತಾಜಿ ನಗರದ ದುರ್ಗಾ ಪರಮೇಶ್ವರಿ, ಹುಲ್ಲುಮಕ್ಕಿಯ ಗುತ್ಯಮ್ಮ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net