ದೋಸ್ತಿಗಳ ನೀತಿ ವಿರೋಧಿಸಿ ಪ್ರತಿಭಟನೆ

bkt-29-4
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅಹಿಂದ ರಾಜ್ಯ ಘಟಕದ ಅಧ್ಯಕ್ಷ ಪ್ರಭುಲಿಂಗ ದಂಡಿವನರ ಮಾತನಾಡಿದರು. ಮುಖಂಡರಾದ ರಾಮು ರಾಕುಂಪಿ, ಆದರ್ಶ ನಾಶಿ, ಮಂಜುಳಾ ಭೂಸಾರೆ, ಮುತ್ತಣ್ಣ ಬಿ.ಇದ್ದರು.
Published on

ಬಾಗಲಕೋಟೆ: ಬಡವರ ಪರ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ, ಜೆಡಿಎಸ್ ನೀತಿ ವಿರೋಽಸಿ ಅಹಿಂದ ವತಿಯಿಂದ ಮುಂದಿನ ದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅಹಿಂದ ರಾಜ್ಯ ಘಟಕದ ಅಧ್ಯಕ್ಷ ಪ್ರಭುಲಿಂಗ ದಂಡಿವನರ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಆದರು ಸಹ ಬಿಜೆಪಿ, ಜೆಡಿಎಸ್ ಇದನ್ನು ರಾಜಕೀಯ ದಾಳವಾಗಿ ಉಪಯೋಗ ಮಾಡಿಕೊಳ್ಳುತ್ತೀವೆ. ತನಿಖೆ ಎದುರಿಸಲು ಸಿದ್ದರಾಮಯ್ಯ ಅವರು ಸಿದ್ದರಿದ್ದಾರೆ.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ರಾಜ್ಯ ಕಾಂಗ್ರೆಸ್ ಸರ್ಕಾರ ಅಭದ್ರಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಕೇಂದ್ರ ಸರ್ಕಾರದ ಹಲವು ಸಚಿವರ ವಿರುದ್ಧ ಎಫಐಆರ್ ದಾಖಲಾಗಿದೆ. ಅವರೆಲ್ಲರೂ ಸಚಿವರಾಗಿ ಮುಂದುವರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿದ್ದಾರೇ, ಇದಕ್ಕೆ ಜಗ್ಗುವದಿಲ್ಲ. ಬಗ್ಗುವದಿಲ್ಲ. ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರಕ್ಷಿತಾ ಈಟಿ ಮಾತನಾಡಿ, ರಾಜಕೀಯ ಕಾರಣಕ್ಕಾಗಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿಲುಕಿಸಿರುವುದು ಬೇಸರ ತರಿಸಿದೆ. ೪೦ ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬಂದಿರುವ ಸಿದ್ದರಾಮಯ್ಯ ಅವರು ಆರೋಪಮುಕ್ತರಾಗಿ ಹೊರ ಬರಲಿದ್ದಾ ಎಂದರು.

ಮುಖಂಡರಾದ ರಾಮು ರಾಕುಂಪಿ, ಆದರ್ಶ ನಾಶಿ, ಮಂಜುಳಾ ಭೂಸಾರೆ, ಮುತ್ತಣ್ಣ ಬಿ.ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net