ದೌರ್ಜನ್ಯ ತಡೆಗಟ್ಟಲು ಕಾನೂನು ಜಾರಿ : ನ್ಯಾಯಾಧೀಶೆ ಜಿ.ಅನಿತಾ

06arsph1ep
ಕಾನೂನು ಅರಿವು, ನೆರವು ಕಾರ್ಯಕ್ರಮವನ್ನು ನ್ಯಾಯಾಧೀಶೆ ಜಿ.ಅನಿತಾ ಉದ್ಘಾಟಿಸಿದರು. ಕೃಷ್ಣಕುಮಾರ್, ಮಂಜುನಾಥ್, ಸಿದ್ದಮಲ್ಲಪ್ಪ, ಯಶೋಧಮ್ಮ ಇತರರಿದ್ದಾರೆ.
Published on


ಅರಸೀಕೆರೆ: ತಾಲೂಕಿನ ಜಾವಗಲ್ ಗ್ರಾಮದಲ್ಲಿರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ಶನಿವಾರ ಕಾನೂನು ಅರಿವು-ನೆರವು, ನಾಗರಿಕ ಸಬಲೀಕರಣ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು.

ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶೆ ಜಿ.ಅನಿತಾ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರೆಯಬೇಕು ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಹಲವು ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆಗೆ ಭಂಗ ಬಾರದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.

ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ಕೃಷ್ಣಕುಮಾರ್ ಮಾತನಾಡಿ, ವರದಕ್ಷಿಣೆ ಕೊಡುವುದು ಮತ್ತು ಪಡೆಯುವುದು ಅಕ್ಷಮ್ಯ ಅಪರಾಧವಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಶಿಕ್ಷೆಯಾಗಲಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಯಶೋದಮ್ಮ, ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ರಮ್ಯಾ, ವಕೀಲರಾದ ಸಿದ್ದಮಲ್ಲಪ್ಪ, ಮಮತಾ, ಲಾವಣ್ಯ, ಪ್ರಾಂಶುಪಾಲ ಮಂಜುನಾಥ್, ಉಪನ್ಯಾಸಕರು, ವಿವಿಧ ಇಲಾಖೆ ನೌಕರರು, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net