ದ್ರವ ತ್ಯಾಜ್ಯ ನಿರ್ವಹಣೆ ಕಾಮಗಾರಿ ತೀವ್ರಗೊಳಿಸಿ

bkt-31-5
Published on

ಬಾಗಲಕೋಟೆ: ದ್ರವ ತ್ಯಾಜ್ಯ ನಿರ್ವಹಣೆ ಕಾಮಗಾರಿಗಳನ್ನು ತೀವ್ರಗೊಳಿಸುವ ಮೂಲಕ ಗ್ರಾಮಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿಂದು ಪಂಚಾಯತ ಅಭಿವೃದ್ದಿ ಅಧಿಕಾರಿ, ಸಹಾಯಕ ನಿರ್ದೇಶಕ ಹಾಗೂ ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸ್ವಚ್ಚ ಭಾರತ ಮಿಷನ್ ಯೋಜನೆಯಡಿ ಅಪೂರ್ಣಗೊಂಡ ಶೌಚಾಲಯ ಹಾಗೂ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿದರು.

ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಪ್ರಸ್ತುತ ವರ್ಷದ ಬೇಡಿಕೆಯಂತೆ ಕಾರ್ಖಾನೆ, ವಾಣಿಜ್ಯ ಹಾಗೂ ಇತರೆ ಮೂಲಗಳಿಂದ ತೆರಿಗೆ ವಾಸೂಲಾತಿ ಮಾಡಲು ತಿಳಿಸಿದರು. ನರೇಗಾ ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಲು ಕ್ರಮವಹಿಸಬೇಕು. ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಮುಖ್ಯ ಯೋಜನಾ ನಿರ್ದೇಶಕ ಪುನಿತ್ ಬಿ.ಆರ್, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ಸಹಾಯಕ ಕಾರ್ಯದರ್ಶಿ ಎಸ್.ಎಂ.ಕಾಂಬಳೆ ಸೇರಿದಂತೆ ಎಲ್ಲ ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net