ದ್ವಿತೀಯ ಪಿಯು ಪರೀಕ್ಷೆ ಆರಂಭ

bkt-9-7
ಬಾಗಲಕೋಟೆ ನವನಗರದ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜುಗಳಲ್ಲಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಕನಿಷ್ಕ, ಬಾದಾಮಿ ತಹಸೀಲ್ದಾರ ಜೆ.ಬಿ.ಮಜ್ಜಗಿ ಸೇರಿದಂತೆ ಇತರರು ಇದ್ದರು.
Published on

ಬಾಗಲಕೋಟೆ: ಜಿಲ್ಲೆಯಾದ್ಯಂತ ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಿದ್ದು, ಪರೀಕ್ಷೆಯ ಮೊದಲದಿನವಾದ ಗುರುವಾರದಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾದಾಮಿ ತಾಲೂಕಿನ ಕೆರೂರ ನಗರ ಹಾಗೂ ಬಾಗಲಕೋಟೆ ನವನಗರದ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜುಗಳಲ್ಲಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಽಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ ಅವರು, ಪರೀಕ್ಷೆಗಳು ಸುಸೂತ್ರವಾಗಿ ನಡೆಬೇಕು. ನಕಲು ಮುಕ್ತವಾಗಿ ಪರೀಕ್ಷೆ ನಡೆಸಲು ಸೂಚಿಸಿದರು.
ಭೇಟಿ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಪ್ರೊಬೇಷನರಿ ಐ.ಎ.ಎಸ್ ಅಽಕಾರಿ ಕನಿಷ್ಕ, ಬಾದಾಮಿ ತಹಸೀಲ್ದಾರ ಜೆ.ಬಿ.ಮಜ್ಜಗಿ ಸೇರಿದಂತೆ ಇತರರು ಇದ್ದರು.

೫೮೮ ವಿದ್ಯಾರ್ಥಿಗಳ ಗೈರು
ಗುರುವಾರ ಒಟ್ಟು ೪೦ ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ವಿಷಯ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಗೆ ಒಟ್ಟು ೨೭೨೨೦ ವಿದ್ಯಾರ್ಥಿಗಳ ಪೈಕಿ ೨೬೬೩೨ ವಿದ್ಯಾರ್ಥಿಗಳು ಹಾಜರಾಗಿದ್ದು, ೫೮೮ ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ. ಕನ್ನಡ ವಿಷಯ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿ ಡಿಬಾರ್ ಆಗಿರುವದಿಲ್ಲವೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net