ದ್ವೇಷಕ್ಕಾಗಿ ಧ್ವನಿ ಮಾದರಿ ಸಂಗ್ರಹ

Andola Shri new
Published on

ಕಲಬುರಗಿ: ನೇಹಾ ಹಿರೇಮಠ ಕೊಲೆ ಖಂಡಿಸಿ ಕಲಬುರಗಿಲ್ಲಿ ಪ್ರತಿಭಟನೆ ವೇಳೆ ನಿಂದನಾತ್ಮಕ ಮಾತುಗಳನ್ನಾಡಿದ್ದಾರೆಂದು ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಪೊಲೀಸರು ಧ್ವನಿ ಮಾದರಿ ಸಂಗ್ರಹಿಸಿ, ಬೆದರಿಸುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ಆಂದೋಲಾ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆರೋಪಿಸಿದ್ದಾರೆ.
ಪೊಲೀಸರು ನೋಟಿಸ್ ನೀಡಿದ್ದಕ್ಕಾಗಿ ಬುಧವಾರ ಠಾಣೆಗೆ ಹಾಜರಾಗಿ ಧ್ವನಿ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಜಾಮೀನು ಮಂಜೂರು ಆಗಿದ್ದು, ಕಲಬುರಗಿ ಜಿಲ್ಲೆ ಬಿಟ್ಟು ಹೋಗದಂತೆ ಷರತ್ತು ವಿಧಿಸಿದೆ. ನಾನು ಯಾವುದೇ ಜಾತಿ ನಿಂದನೆ ಮಾಡಿಲ್ಲ. ರಾಜಕೀಯ ಒತ್ತಡದಿಂದ ಸುಳ್ಳು ಆರೋಪ ಮಾಡಿ, ದೂರು ದಾಖಲಿಸಿದ್ದಾರೆ. ಈ ಕುರಿತು ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸುತ್ತೇವೆ ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಬಾಧಿತರೂ ದೂರು ನೀಡಿಲ್ಲ. ಆದರೂ ಪೊಲೀಸರು ಒತ್ತಡದಿಂದ ಬೆದರಿಸುವ ತಂತ್ರವಾಗಿ ನೋಟಿಸ್ ನೀಡಿ ಧ್ವನಿ ಮಾದರಿ ಸಂಗ್ರಹಿಸುತ್ತಿದ್ದಾರೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ.
ದೂರು ದಾಖಲಾಗಿತ್ತು: ನೇಹಾ ಹಿರೇಮಠ ಕೊಲೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ ವೇಳೆ ನಿಂದನಾತ್ಮಕ ಭಾಷಣದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಸಂಸದ ಡಾ.ಉಮೇಶ ಜಾಧವ್, ಶ್ರೀ ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರದೇಶ ಕುರುಬ ಸಂಘದ ಉಪಾಧ್ಯಕ್ಷ ನಾಗೇಂದ್ರಪ್ಪ ಪೂಜಾರಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ೨೭ ರಂದು ಸ್ವಾಮೀಜಿ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net