ಧರೆಗೆ ಗುದ್ದಿದ ಬಸ್, 35 ಪ್ರಯಾಣಿಕರಿಗೆ ಗಾಯ

05 YLP 01
Published on

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್ ಧರೆಗೆ ಗುದ್ದಿದ ಪರಿಣಾಮ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 35 ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಬಳಗಾರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸೋಮವಾರ ನಡೆದಿದೆ.ಕಳಚೆಯಿಂದ ಯಲ್ಲಾಪುರಕ್ಕೆ ಬರುತ್ತಿದ್ದ ಯಲ್ಲಾಪುರ ಘಟಕದ ಬಸ್​ನ ಸ್ಟೇರಿಂಗ್ ಕಟ್ ಆಗಿ ಧರೆಗೆ ಗುದ್ದಿದೆ. ಗಾಯಗೊಂಡವರಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಗಾಯಾಳುಗಳನ್ನು ಯಲ್ಲಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೇರಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿದ್ಯಾರ್ಥಿಗಳ ಮುಖಕ್ಕೆ ಹಾಗೂ ಕಾಲಿಗೆ ಗಾಯಗಳಾಗಿವೆ. ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ಚಾಲಕನೂ ಗಾಯಗೊಂಡಿದ್ದು, ಆತನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಗಮದಿಂದ ತಾತ್ಕಾಲಿಕ ಪರಿಹಾರ: ಅಪಘಾತದಲ್ಲಿ ಗಾಯಗೊಂಡವರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ವಾಕರಸಾ ನಿಗಮದ ಅಧ್ಯಕ್ಷ ವಿ. ಎಸ್. ಪಾಟೀಲ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ನಿಗಮದ ವತಿಯಿಂದ ತಾತ್ಕಾಲಿಕ ಪರಿಹಾರಧನ ವಿತರಿಸಿದರು. ತಾ.ಪಂ. ಅಧ್ಯಕ್ಷೆ ಚಂದ್ರಕಲಾ ಭಟ್ಟ, ಪ.ಪಂ. ಉಪಾಧ್ಯಕ್ಷೆ ಶಾಮಿಲಿ ಪಾಟಣಕರ್ ಪ್ರಮುಖರಾದ ಶ್ರೀನಿವಾಸ ಗಾಂವ್ಕಾರ, ಗಣಪತಿ ಬೋಳಗುಡ್ಡೆ, ಕೆ.ಟಿ. ಹೆಗಡೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net