ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜನಪರ

12 ckm 3
ಚಿಕ್ಕಮಗಳೂರು ತಾಲೂಕಿನ ನೆಟ್ಟೆಕೆರೆಹಳ್ಳಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಬುಧವಾರ ಏರ್ಪಡಿಸಿದ್ದ ಕೆರೆಹೂಳು ಎತ್ತುವ ಕಾಮಗಾರಿಗೆ ಶಾಸಕ ಎಚ್.ಡಿ.ತಮ್ಮಯ್ಯ ಗುದ್ದಲಿ ಪೂಜೆ ನೆರವೇರಿಸಿದರು. ಗೀತಾ, ಜಯಣ್ಣ, ಲೋಕೇಶ್, ನಾಗೇಶ್, ಚಂದ್ರಶೇಖರ್, ಪ್ರೇಮಾ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಮುಂದಾಲೋಚನೆಯಿAದ ರಾಜ್ಯದ ಸಾಕಷ್ಟು ಕೆರೆಗಳ ಅಭಿವೃದ್ದಿ ಹಾಗೂ ಗ್ರಾಮಕ್ಕೆ ಮೂಲಸೌಲಭ್ಯ ಕಲ್ಪಿಸಿ ಜನಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು.

ತಾಲೂಕಿನ ನೆಟ್ಟೆಕೆರೆಹಳ್ಳಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಬುಧವಾರ ಏರ್ಪಡಿಸಿದ್ದ ಕೆರೆಹೂಳು ಎತ್ತುವ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಶ್ರೀವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಿಂದ ಸಾಕಷ್ಟು ಹಳ್ಳಿಗಳು ಉದ್ದಾರವಾಗಿವೆ. ಅಲ್ಲದೇ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಂಡು ಜೀವನ ಸಾಗಿಸಲು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಗ ಳು ಸಹಕಾರಿಯಾಗಿದೆ ಎಂದು ಹೇಳಿದರು.

ಧರ್ಮಸ್ಥಳ ಯೋಜನೆಯಿಂದ ವಾತ್ಸಲ್ಯ ಮನೆ, ನಿರ್ಗತಿಕರಿಗೆ ಮಾಶಾಸನ, ಅನೇಕ ದೇವಾಲಯಗಳ ಜೀರ್ಣೋದ್ದಾರಕ್ಕೆ ಅನುದಾನ, ಸಮುದಾಯದ ಏಳಿಗೆಗೆ ಸಾಮಾಜಿಕವಾಗಿ ಪ್ರೋತ್ಸಾಹ ಕಲ್ಪಿಸುತ್ತಿದ್ದು , ಜನಸಾಮಾನ್ಯರು ಯೋಜನೆಗಳ ಸೌಲಭ್ಯ ಸದುಪಯೋಗಪಡಿಸಿಕೊಂಡು ಮುನ್ನೆಡೆಯಬೇಕು ಎಂದು ತಿಳಿಸಿದರು.

ತಾಲೂಕಿನಲ್ಲಿರುವ ಕೆರೆಗಳ ಹೂಳೆತ್ತಿರುವ ಮಣ್ಣನ್ನು ಸ್ಥಳೀಯ ರೈತರು ಜಮೀನಿಗೆ ಬಳಸಿಕೊಂಡು ಉತ್ತಮ ಫಸಲು ಪಡೆಯಲು ಸಾಧ್ಯ. ಅಲ್ಲದೇ ಕೆರೆಯು ಸ್ವಚ್ಚಂಧವಾಗುವ ಮೂಲಕ ದನಕರು, ಪಕ್ಷಿಗಳಿಗೆ ಯೋಗ್ಯವಾದ ಕುಡಿಯುವ ನೀರು ದೊರೆಯಲಿದೆ ಎಂದು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕಿ ಗೀತಾ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು ೧೮ ಕೆರೆಗಳ ಹೂಳೆತ್ತುವ ಕಾರ್ಯವನ್ನು ಗ್ರಾಮಾಭಿವೃದ್ದಿ ಯೋಜನೆಯಡಿ ಮಾಡಲಾಗಿದೆ. ಅಲ್ಲದೇ ರಾಜ್ಯಾದ್ಯಂತ ೫೭೮ ಕೆರೆಗಳ ಹೂಳು ತೆಗೆದು ಸ್ಥಳೀಯ ರೈತರಿಗೆ ಅನುಕೂಲ ಕಲ್ಪಿಸಿಕೊಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಪಂ ಅಧ್ಯಕ್ಷೆ ಭಾಗ್ಯ ಶ್ರೀನಿವಾಸ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಜಯಣ್ಣ, ಕೆರೆ ಸಮಿತಿ ಅಧ್ಯಕ್ಷ ಲೋಕೇಶ್, ಉಪಾಧ್ಯಕ್ಷ ನಾಗೇಶ್, ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್, ಪಿಡಿಓ ಪ್ರೇಮ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಕುಮಾರ್, ತಾಲೂಕು ಯೋಜನಾಧಿಕಾರಿ ರಮೇಶ್ ನಾಯ್ಕ, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಹರೀಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net