ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸೌಲಭ್ಯ ಸದುಪಯೋಗವಾಗಲಿ

IMG-20230703-WA0008
Published on

ಮೂಗೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಜನರು ಸಂಸ್ಥೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಹೇಳಿದರು.


ಮೂಗೂರಿನ ಕೆಪಿಎಸ್ ಶಾಲೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ಮೂಗೂರು ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಹಿಳಾ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಕೌಟುಂಬಿಕ ಸಾಮರಸ್ಯ ಕಾಪಾಡಿಕೊಂಡರೆ ಬದುಕಿನಲ್ಲಿ ನೆಮ್ಮದಿ ಕಾಣಲು ಸಾಧ್ಯ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಶಿಕ್ಷಣ, ಆರೋಗ್ಯ, ವೃತ್ತಿ, ಕಾನೂನು ಅರಿವು, ಹಣಕಾಸಿನ ನೆರವು ಸೇರಿದಂತೆ ವಿವಿಧ ರೀತಿಯ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದೆ. ಇವುಗಳ ಉಪಯೋಗವನ್ನು ಪಡೆದು ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರೋಗ್ಯ ಶಿಬಿರದಲ್ಲಿ 100ಕ್ಕೂ ಹೆಚ್ಚು ಜನರು ತಪಾಸಣೆಗೆ ಒಳಗಾದರು. ವೈದ್ಯರಾದ ಡಾ.ರಾಘವೇಂದ್ರ, ರಘುರಾಂ, ಸುಧೀಂದ್ರ, ಸಂಗೀತಾ, ಬೇಬಿ, ಶಿಕ್ಷಕ ಕೇಶವ್, ಸಂಸ್ಥೆಯ ಸಮನ್ವಯಾಧಿಕಾರಿ ಕಾವೇರಿ, ಒಕ್ಕೂಟದ ಅಧ್ಯಕ್ಷೆ ಸಾವಿತ್ರಿ, ಸೇವಾ ಪತ್ರಿನಿಧಿ ನಿರ್ಮಲಾ, ಸಂಘಗಳ ಸದಸ್ಯರು, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net