

ನಾಪೋಕ್ಲು: ರಾಜ್ಯದ ಹಲವು ಭಾಗಗಳಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮಹಿಳೆಯರ ಸಬಲೀಕರಣಕ್ಕೆ ಕಾರಣವಾಗಿದೆ ಎಂದು ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹೇಳಿದರು.
ಶ್ರೀ ಭಗವತಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ನಾಪೋಕ್ಲು-ಸುಭಾಷ್ ನಗರ ಕಾರ್ಯಕ್ಷೇತ್ರದ ಒಕ್ಕೂಟ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಉತ್ತಮ ಕಾರ್ಯಗಳಾಗುತ್ತಿದ್ದು, ಹಲವು ಭಾಗಗಳಲ್ಲಿ ಸಂಘಗಳು ಕ್ರಿಯಾಶೀಲವಾಗಿವೆ. ಕೆಲವೆಡೆ ಅರಿವಿನ ಕೊರತೆಯಿಂದ ಹೆಚ್ಚಿನ ಪ್ರಗತಿ ಸಾಧಿಸಿಲ್ಲ ಎಂದರು.
ಗ್ರಾಮ ಪಂಚಾಯತಿ ಸದಸ್ಯ ಅರುಣ್ ಬೇಬ ಮಾತನಾಡಿ, ಸಮಾಜದಲ್ಲಿ ಕಟ್ಟ ಕಡೆಯ ವ್ಯಕ್ತಿಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೆರವು ನೀಡಲಾಗುತ್ತಿದೆ ಎಂದರು.
ಸಂಸ್ಥೆ ಮೇಲ್ವಿಚಾರ ಸುನೀಲ್ ಮಾತನಾಡಿದರು. ಒಕ್ಕೂಟದ ಅಧ್ಯಕ್ಷೆ ಮುತ್ತುರಾಣಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಾಲಿನಿ, ಒಕ್ಕೂಟದ ಉಪಾಧ್ಯಕ್ಷೆ ಬೋಜಮ್ಮ , ಪೋಲಿಸ್ ಸಿಬ್ಬಂದಿ ಷರಿಫ್, ಸೇವಾ ಪ್ರತಿನಿಧಿ ಉಮಾಲಕ್ಷ್ಮೀ ಇತರರಿದ್ದರು.