ಧರ್ಮಸ್ಥಳ ಯೋಜನೆಯಿಂದ ದೇವಾಲಯ ಜೀರ್ಣೋದ್ಧಾರಕ್ಕೆ ನೆರವು

IMG_20250603_130808
Published on

ಗಂಡಸಿ: ಶ್ರೀಕ್ಷೇತ್ರ ಧರ್ಮಸ್ಥಳದಿಂದ ರಾಜ್ಯದ ನಾನಾ ಭಾಗಗಳಲ್ಲಿ ಶಿಥಿಲಗೊಂಡಿರುವ ದೇವಾಲಯಗಳ ಜೀರ್ಣೋದ್ಧಾರಕ್ಕೆ ಕೋಟ್ಯಂತರ ರೂಪಾಯಿ ಧನ ಸಹಾಯ ನೀಡಲಾಗುತ್ತಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಕೆ.ಉದಯ್ ತಿಳಿಸಿದರು.

ಹೋಬಳಿಯ ಮಾವಿನಕೆರೆ ಗ್ರಾಮದ ಶ್ರೀಹುಚ್ಚಮ್ಮದೇವಿ ದೇವಾಲಯದ ಜೀರ್ಣೋದ್ಧಾರಕ್ಕೆ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾಗಿರುವ ಐವತ್ತು ಸಾವಿರ ಡಿ.ಡಿ.ಯನ್ನು ದೇವಾಲಯದ ಆಡಳಿತ ಮಂಡಳಿಗೆ ಹಸ್ತಾಂತರಿಸಿ ಮಾತನಾಡಿದರು.

ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಕ್ಷಣ, ಮಹಿಳೆಯರ ಸಬಲೀಕರಣ, ಕೃಷಿ ಚಟುವಟಿಕೆಗೆ ರಾಜ್ಯದ ಜನತೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ದೊರಕಿಸುತ್ತಿದ್ದು, ಪ್ರತಿನಿಧಿ ಸೌಲಭ್ಯ, ಕೆರೆಗಳ ನಿರ್ಮಾಣ, ಶುದ್ಧ ನೀರಿನ ಘಟಕ, ವಾತ್ಸಲ್ಯ ಇನ್ನು ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಧಾರ್ಮಿಕ ಮುಜರಾಯಿ ಇಲಾಖೆಯ ಸದಸ್ಯ ಶ್ರೀಧರ್, ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ನಾಗರಾಜ್, ಸದಸ್ಯರಾದ ರಮೇಶ್, ಜವರಪ್ಪ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳಾದ ಕೇಶವಮೂರ್ತಿ, ಪ್ರಸಾದ್ ರಂಗಾಪುರ, ವಲಯದ ಮೇಲ್ವಿಚಾರಕರಾದ ದಿನೇಶ್, ಪ್ರತಿನಿಧಿ ಮಹಾಲಕ್ಷ್ಮೀ ಹಾಗೂ ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net