ಧರ್ಮಸ್ಥಳ ಯೋಜನೆಯಿಂದ ಪರಿಸರ ದಿನಾಚರಣೆ

Dharmasthala
Published on

ಹೊಳೆನರಸೀಪುರ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪರಿಸರ ಚೆನ್ನಾಗಿದ್ದರೆ ಮಾನವ ಆರೋಗ್ಯದಿಂದ ಇರಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಲಕ್ಷ್ಮೇಗೌಡ ತಿಳಿಸಿದರು.

ಹೊಳೆನರಸೀಪುರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಬುಧವಾರ ಹಳೇಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಪರಿಸರ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ನಮ್ಮ ಮನೆಗಳ ಸುತ್ತ ಗಿಡಗಳನ್ನು ನೆಡುವ ಮೂಲಕ ಮುಂದಿನ ಪೀಳಿಗೆಗೆ ಪರಿಸರ ಉಳಿಸಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು.

ಕೃಷಿ ಅಧಿಕಾರಿ ಯು.ಪಿ.ಉಮೇಶ, ಶಿಕ್ಷಕರು, ಸೇವಾಪ್ರತಿನಿಧಿ ಇಂದ್ರಾಣಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net