ಧರ್ಮಸ್ಥಳ ಸಂಘದಿಂದ ಅಭಿವೃದ್ಧಿ

31Rayabag3
Published on

ರಾಯಬಾಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಅನೇಕ ಜನಪರ ಅಭಿವೃದ್ಧಿ ಕಾರ್ಯ ಮಾಡುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ತಾಲೂಕು ಯೋಜನಾಧಿಕಾರಿ ಮಹೇಶ್ವರಪ್ಪ ಹೇಳಿದರು.

ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ಆದರ್ಶ ಶಿಕ್ಷಣ ಸಂಸ್ಥೆಯ ಶಾಲೆ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಮಂಜೂರಾದ ೧ ಲಕ್ಷ ರೂ. ಅನುದಾನದ ಆದೇಶ ಪತ್ರ ಹಸ್ತಾಂತರಿಸಿ ಮಾತನಾಡಿ, ತಾಲೂಕಿನಲ್ಲಿ ಕೆರೆ ಅಭಿವೃದ್ಧಿ, ದೇವಸ್ಥಾನಗಳ ಜಿರ್ಣೋದ್ಧಾರ, ಶಾಲೆಗಳ ದುರಸ್ತಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಧರ್ಮಸ್ಥಳ ಸಂಘದಿಂದ ಕೈಗೊಂಡಿರುವುದಾಗಿ ತಿಳಿಸಿದರು.

ಸಂಸ್ಥೆ ಉಪಾಧ್ಯಕ್ಷ ಜಿನೇಶ್ವರ ಮಗದುಮ್ಮ, ಕಾರ್ಯದರ್ಶಿ ಎ.ಟಿ.ಕೂಗೆ, ಆಡಳಿತ ಮಂಡಳಿ ಸದಸ್ಯರಾದ ಧೂಳಗೌಡ ಪಾಟೀಲ, ಕುಮಾರ ಕಾಮಗೌಡ, ಅರಿಹಂತ ಕಾಮಗೌಡ, ಎಸ್‌ಡಿಎಂಸಿ ಅಧ್ಯಕ್ಷ ರಮೇಶ ಬೆಳಗಲೆ, ಮುಖ್ಯಶಿಕ್ಷಕ ಎ.ಕೆ.ಸಲಗರೆ, ಧರ್ಮಸ್ಥಳ ಕೃಷಿ ಮೇಲ್ವಿಚಾರಕ ಗೋಪಾಲ ಕುಂಬಾರ, ಎಸ್.ಬಿ.ಬೆನಾಡೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net