ಧರ್ಮಸ್ಥಳ ಸಂಸ್ಥೆ ಕೊಡುಗೆ ಅನನ್ಯ

21MDLG1A
Published on

ಮೂಡಲಗಿ: ಮಹಿಳಾ ಸಶಕ್ತಿಕರಣ ದೃಷ್ಟಿಯಿಂದ ಕಾರ್ಯ ನಿರ್ವಹಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೊಡುಗೆ ಅನನ್ಯ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ತಾಲೂಕಿನ ತುಕಾನಟ್ಟಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಜ್ಞಾನ ವಿಕಾಸ ಕಾರ್ಯಕ್ರಮದಡಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.

ಧಗ್ರಾಯೋ ಪ್ರಾದೇಶಿಕ ನಿರ್ದೇಶಕಿ ದಯಾಶೀಲ ಮಾತನಾಡಿ, ಗ್ರಾಮೀಣ ಪ್ರದೇಶದ ಮಹಿಳೆಯರಲ್ಲಿ ಜ್ಞಾನ ಮತ್ತು ಶಕ್ತಿ ತುಂಬುವ ಪರಿಕಲ್ಪನೆಯೇ ಡಾ.ಹೇಮಾವತಿ ಹೆಗ್ಗಡೆ ಅವರ ಕನಸಿನ ಕಾರ್ಯಕ್ರಮವಾಗಿದೆ. ಮಹಿಳೆಯರ ಆಸಕ್ತಿ, ಕಲೆ, ಅಭಿರುಚಿ ಹಾಗೂ ವಿಚಾರಧಾರೆಗಳನ್ನು ಅನಾವರಣಗೊಳಿಸಲು ಜ್ಞಾನ ವಿಕಾಸ ಕಾರ್ಯಕ್ರಮ ವೇದಿಕೆಯಾಗಿದೆ ಎಂದರು.

ಕಾವ್ಯಶ್ರೀ ಅಮ್ಮನವರು ಆಶೀರ್ವಚನ ನೀಡಿದರು. ಸಿರಿಗನ್ನಡ ಮಹಿಳಾ ವೇದಿಕೆ ಅಧ್ಯಕ್ಷೆ ರಜನಿ ಜೀರಗ್ಯಾಳ ಮಾತನಾಡಿದರು. ಜನಜಾಗೃತಿ ವೇದಿಕೆ ಸದಸ್ಯ ಭರಮಣ್ಣ ಉಪ್ಪಾರ, ಸಂಪನ್ಮೂಲ ವ್ಯಕ್ತಿ ಶೈಲಜಾ ಕೊಕ್ಕರಿ, ಕುಮಾರ ಮರ್ದಿ, ಧಗ್ರಾಯೋ ಜಿಲ್ಲಾ ನಿರ್ದೇಶಕಿ ನಾಗರತ್ನಾ ಹೆಗ್ಗಡೆ, ತಾಲೂಕು ಯೋಜನಾಧಿಕಾರಿ ರಾಜು ನಾಯಕ ಇತರರಿದ್ದರು. ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ವಿಜಯಲಕ್ಷ್ಮೀ ಮುರನಾಳ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net