ಧರ್ಮಸ್ಥಳ ಸಂಸ್ಥೆಯಿಂದ ಗ್ರಾಮಾಭಿವೃದ್ಧಿ

IMG-20231007-WA0009
Published on

ಔರಾದ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಮುಖಿ ಕಾರ್ಯಕ್ರಮ ಮಾಡುವ ಮೂಲಕ ಗ್ರಾಮೀಣ ಭಾಗದ ಜನರ ಬದುಕು ಹಸನು ಮಾಡುತ್ತಿದೆ ಎಂದು ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ ಹೇಳಿದರು.

ಪಟ್ಟಣದ ಕನಕ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಜಿಲ್ಲ ಜನ ಜಾಗೃತಿ ವೇದಿಕೆಯಿಂದ ಶನಿವಾರ ಹಮ್ಮಿಕೊಂಡ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಹಲವು ಜನಪರ ಕಾರ್ಯ ಮಾಡುತ್ತಿದ್ದು, ಸಾರ್ವಜನಿಕರ ವಿರುದ್ಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಸಂಸ್ಕಾರಯುತ ಜೀವನ ನಡೆಸಲು ಪ್ರೇರಣೆ ನೀಡುತ್ತಿರುವುದು ಶ್ಲಾಘನೀಯ. ತಾಲೂಕಿನ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಿದರೆ ತಹಸೀಲ್ದಾರ್ ಕಚೇರಿ ಗಮನಕ್ಕೆ ತರಬೇಕು ಎಂದರು.

ಧರ್ಮಸ್ಥಳ ಸಂಸ್ಥೆ ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಗೌಡ ಮಾತನಾಡಿ, ಶ್ರೀ ಡಾ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಸಂಸ್ಥೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಯುವಕರು ದುಶ್ಚಟಗಳಿಂದ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿ. ಎಲ್ಲರ ಸಹಕಾರದೊಂದಿಗೆ ಅರಿವು ಮೂಡಿಸುವ ಕೆಲಸ ಮಾಡೋಣ ಎಂದರು.

ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಉಪಾಧ್ಯಕ್ಷ ಡಾ.ಶಾಲಿವಾನ್ ಉದಗಿರೆ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮ ಜಿ¯್ಲೆಯ ಪ್ರತಿ ಕುಟುಂಬಕ್ಕೆ ಸಹಕಾರಿಯಾಗಿದೆ. ಜನಜಾಗೃತಿಯಿಂದ ಯುವಕರು ದುಶ್ಚಟ ತೊರೆದು ಉತ್ತಮ ಸಂಸ್ಕಾರ ಪಡೆಯುತ್ತಿರುವುದು ಉತ್ತಮ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಮುಖರಾದ ಬಸವರಾಜ ದೇಶಮುಖ, ಅಶೋಕ ಶೆಂಬಳ್ಳಿ, ಮಡಿವಾಳಪ್ಪ, ಅಮೃತರಾವ ಬಿರಾದಾರ ಇತರರಿದ್ದರು. ವಲಯ ಮೇಲ್ವಿಚಾರಕ ಲೋಕೇಶ ಭಾಲ್ಕೆ ವಂದಿಸಿದರು. ಅನೀಲ ದಾವಣೆ ನಿರೂಪಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net