

ಅರಕಲಗೂಡು: ತಾಲೂಕಿನ ರಾಮನಾಥಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಇತ್ತೀಚೆಗೆ ಗ್ರಾಮ ಸುಭಿಕ್ಷಾ ಕಾರ್ಯಕ್ರಮ ಹಾಗೂ ಆಶ್ಲೇಷ ಬಲಿ ಹೋಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಪಂ ಮಾಜಿ ಸದಸ್ಯ ಎಚ್.ಎಸ್. ಶಂಕರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಾಡಿಕೊಂಡು ಬರುತ್ತಿದೆ. ಶಿಕ್ಷಣ ಕ್ಷೇತ್ರಗಳಲ್ಲಿ ಹಿರಿಯ ಪ್ರಾಥಮಿಕ, ಪೌಢಶಾಲೆಗಳಿಗೆ ಬೇಕಾದ ಪಿಠೋಪಕರಣಗಳ ಸವಲತ್ತುಗಳು, ಸ್ವಸಹಾಯ ಸಂಘಗಳಿಗೆ ಸವಲತ್ತು, ಶಿಥಿಲವಾದ ನೂರಾರು ದೇವಾಲಯಗಳ ಜಿರ್ಣೋದ್ಧಾರ, ಸುಮಾರು 50ಕ್ಕೂ ಹೆಚ್ಚು ಹಾಲು ಉತ್ಪಾದಕರ ಸಂಘಗಳು, ರುದ್ರಭೂಮಿಗಳ ಅಭಿವೃದ್ಧಿ ನದಿ, ಕೆರೆ- ಕಟ್ಟೆ ದೇವಾಲಯದ ಸುತ್ತಮುತ್ತಲಿನ ಸ್ವಚ್ಛತೆ ಮುಂತಾದ ಮೂಲ ಸೌಕರ್ಯಗಳನ್ನು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡಿಕೊಂಡು ಶ್ಲಾಘನೀಯವಾಗಿದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವನಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಪಾರುಪತ್ತೇದಾರ್ ರಮೇಶ್ ಭಟ್, ಬಸವಾಪಟ್ಟಣ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಂದ್ರಕುಮಾರ್, ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಪರಿಷತ್ತಿನ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಕೆ.ಶ್ರೀನಿವಾಸ್, ಸಿದ್ದರಾಜು, ಸಂಸ್ಥೆಯ ವಲಯ ಮೇಲ್ವಿಚಾರಕಿ ಹೇಮಲತಾ, ಮಂಜು ಇತರರಿದ್ದರು.