ಧಾರವಾಡ ಜಿಲ್ಲೆಯಲ್ಲಿ ಮತ್ತೆ 231 ಶಂಕಿತರು

carona logo
Published on

ಧಾರವಾಡ: ಜಿಲ್ಲೆಯಲ್ಲಿ ಶಂಕಿತರ ಜತೆಗೆ ನಿಗಾವಹಿಸಿದವರ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಬುಧವಾರ ಸಂಜೆವರೆಗಿನ 24 ಗಂಟೆ ಅವಧಿಯಲ್ಲಿ 231 ಶಂಕಿತರು ಪತ್ತೆಯಾಗಿದ್ದು, ಅವರ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಶಂಕಿತರ ಜತೆಗೆ ನಿಗಾ ವಹಿಸಲಾಗಿರುವವರ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಮಂಗಳವಾರ ಇದ್ದ (ಒಟ್ಟು) 4543 ಶಂಕಿತರ ಸಂಖ್ಯೆ ಬುಧವಾರ 4829ಕ್ಕೆ ಏರಿಕೆಯಾಗಿದೆ.

ಈವರೆಗೆ ಜಿಲ್ಲೆಯಲ್ಲಿ 4203 ಶಂಕಿತ ವ್ಯಕ್ತಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 3444 ಜನರ ವರದಿ ನೆಗೆಟಿವ್ ಬಂದಿವೆ. 11 ಪ್ರಕರಣದಲ್ಲಿ ಪಾಸಿಟಿವ್ ಬಂದಿದ್ದು, 5 ಜನರಿಗೆ ಕಿಮ್್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 6 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 754 ವರದಿಗಳು ಬರಬೇಕಿದೆ. ಮಂಗಳವಾರ ಬಾಕಿ ಇದ್ದ 862 ವರದಿಗಳ ಪೈಕಿ 339 ವರದಿಗಳು ನೆಗೆಟಿವ್ ಬಂದಿವೆ. ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯು ವಿದೇಶದಿಂದ ಆಗಮಿಸಿರುವ ಹಾಗೂ ಅವರ ಸಂಪರ್ಕಕ್ಕೆ ಒಳಗಾದ 4829 ಜನರ ಮೇಲೆ ನಿಗಾ ಇಟ್ಟಿದೆ. ಈ ಪೈಕಿ 3909 ಜನರು ಮನೆಯಲ್ಲೇ ಪ್ರತ್ಯೇಕವಾಗಿ (14 ದಿನ) ವಾಸವಾಗಿದ್ದಾರೆ. ಆಸ್ಪತ್ರೆ ಪ್ರತ್ಯೇಕ ವಾರ್ಡಗಳಲ್ಲಿ 7 ಜನ ದಾಖಲಾಗಿದ್ದಾರೆ. 105 ಜನರು 14 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದರೆ, 808 ಜನರು 28 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net