ಧಾರವಾಡ ಹೊಸ ಡಿಸಿ ಮೊದಲ ಸಭೆ

30 vikram 9
Published on

ಧಾರವಾಡ: ಕರೊನಾ ಸೋಂಕಿತರ ಪತ್ತೆ ಕಾರ್ಯಕ್ಕೆ ಸ್ಥಳೀಯ ಆಸಕ್ತ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳನ್ನು ಸ್ವಯಂ ಸೇವಕರಾಗಿ ನಿಯೋಜಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಿಕಿತ್ಸೆ ನಂತರ ಗುಣವಾಗಿ ಬಿಡುಗಡೆಯಾಗುವ ವ್ಯಕ್ತಿಗಳು ಸಾಮಾಜಿಕ ತಾರತಮ್ಯಕ್ಕೆ ಒಳಗಾಗದಂತೆ ಸಾಧ್ಯವಾದಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸಾಂಸ್ಥಿಕ ಕ್ವಾರಂಟೈನ್​ನಲ್ಲಿ ಇರುವವರಿಗೆ ಉತ್ತಮ ಆಹಾರ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ಮಾಸ್ಕ್ ಧರಿಸದಿರುವವರಿಗೆ ದಂಡ ವಿಧಿಸುವುದನ್ನು ಚುರುಕುಗೊಳಿಸಬೇಕು ಎಂದು ಸೂಚಿಸಿದರು.

ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ್, ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net