

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೇಂದ್ರ ಲಲಿತ ಕಲಾ ಅಕಾಡೆಮಿ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಲು ಸೋಮವಾರ ಆಗಿಸಿದ್ದ ಕೇಂದ್ರ ಸಂಸ್ಕೃತಿ ಮಂತ್ರಾಲಯದ ರಾಜ್ಯ ಸಚಿವ ಅರ್ಜುನ ರಾಮ ಮೇಘ್ವಾಲ್ ಅವರು ಧಾರವಾಡಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸಿದರು.
ಸವಾಯಿ ಗಂಧರ್ವರ ಜನ್ಮಶತಮನೋತ್ಸವ ಆಚರಣೆಗೆ ಅಗತ್ಯ ಅನುದಾನ ನೀಡಲಾಗುವುದು. ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಾದೇಶಿಕ ಕಚೇರಿ, ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರದ ಕಚೇರಿ ಮತ್ತು ಕೇಂದ್ರ ನಾಟಕ ಅಕಾಡೆಮಿ ಕಚೇರಿಯನ್ನು ಧಾರವಾಡದಲ್ಲಿ ಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದರು.
ಕೇAದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವದಂತೆ ಸ್ವಾತಂತ್ರ‍್ಯ ಸಂಗ್ರಾಮದ ಬೆಳ್ಳಿ ಚುಕ್ಕಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ವಸ್ತು ಸಂಗ್ರಹಾಲಯ ಸ್ಥಾಪಿಸಲು ಪ್ರಸ್ತಾವ ಸಲ್ಲಿಸಿದರೆ ೫ ಕೋಟಿ ರೂ. ನೆರವು ನೀಡಲಾಗುವುದು. ಅಲ್ಲದೆ, ವೀರರಾಣಿ ಕಿತ್ತೂರು ಚೆನ್ನಮ್ಮ ನಾಟಕವನ್ನು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಪ್ರದರ್ಶಿಸಲು ಸುಮÁರು ೧.೫ ಕೋಟಿ ರೂ. ಅನುದಾನ ಬಿಡುಗಡೆ ಮÁಡಲಾಗುವುದು ಎಂದರು.
ಧಾರವಾಡ ನಗರದಲ್ಲಿರುವ ರಮÁಬಾಯಿ ಡಾ. ಅಂಬೇಡ್ಕರ್ ವಸತಿ ನಿಲಯದ ಅಭಿವೃದ್ಧಿಗೆ ಸಾಮÁಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದಿAದ ಆಗತ್ಯ ಅನುದಾನ ನೀಡಲಾಗುವುದು ಎಂದು ಸಚಿವ ಅರ್ಜುನ ರಾಮ ಭರವಸೆ ನೀಡಿದರು.