ಧಾರವಾಡದಲ್ಲಿ ಆಕಸ್ಮಿಕ ಬೆಂಕಿಗೆ ಕಾರ್ ಭಸ್ಮ

10 DWD 8
Published on

ಧಾರವಾಡ: ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರ್ ಸಂಪೂರ್ಣ ಸುಟ್ಟ ಘಟನೆ ನಗರದ ಉದಯ ಹಾಸ್ಟೆಲ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. ಚಲಿಸುತ್ತಿದ್ದ ಕಾರ್​ನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಮಾತ್ರದಲ್ಲಿ ಕಾರ್ ತುಂಬ ಬೆಂಕಿ ಆವರಿಸಿ ಧಗಧಗನೆ ಉರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅತ್ತಿಕೊಳ್ಳದ ಅಬ್ದುಲ್ ರಜಾಕ್ ಎಂಬುವರಿಗೆ ಸೇರಿದ ಕಾರ್ ಇದಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಹೊರಗೆ ಓಡಿದ್ದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದೆ.

ಟ್ಯಾಂಕರ್​ಗೆ ಕಾರು ಡಿಕ್ಕಿ, ಓರ್ವ ಸಾವು

ಹುಬ್ಬಳ್ಳಿ: ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ವೈಷ್ಣವಿ ಲಾಡ್ಜ್ ಎದುರು ರಸ್ತೆಬದಿ ನಿಂತಿದ್ದ ಟ್ಯಾಂಕರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವಕನೊಬ್ಬ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.

ಹಾವೇರಿ ತಾಲೂಕು ಮರಡೂರ ಗ್ರಾಮದ ಹುಸೇನಸಾಬ ಫಕೀರಸಾಬ ನದಾಫ್ (23) ಮೃತಪಟ್ಟವರು.

ರಾಣೆಬೆನ್ನೂರ ತಾಲೂಕು ಹನುಮಾಪುರ ಗ್ರಾಮದ ರುಸ್ತುಂ ಶರೀಫಸಾಬ ನದಾಫ್ ಜತೆ ಹುಸೇನಸಾಬ ಕಾರಿನಲ್ಲಿ ಹುಬ್ಬಳ್ಳಿ ಕಡೆಗೆ ಬರುತ್ತಿದ್ದರು. ಈ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್​ಗೆ ಕಾರು ಡಿಕ್ಕಿ ಹೊಡೆದಿದೆ. ಪಕ್ಕದಲ್ಲಿ ಕುಳಿತಿದ್ದ ಹುಸೇನಸಾಬ ಗಂಭೀರವಾಗಿ ಗಾಯಗೊಂಡಿದ್ದರು. ಕಿಮ್ಸ್​ಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಗಾಯಾಳು ಹುಸೇನ್​ನನ್ನು ಕಿಮ್ಸ್​ಗೆ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net