

ದಾವಣಗೆರೆ: ಬಂಬೂಬಜಾರ್' ರಸ್ತೆಯ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಸಮಿತಿ, ಮೇದಾರ ಗಿರಿಜನ ಅಭ್ಯುದಯ ಸೇವಾ ಸಂಘದಿಂದ ಗಣೇಶ ಪ್ರತಿಷ್ಠಾಪನೆಯ ಸುವರ್ಣ ಮಹೋತ್ಸವ ನಿಮಿತ್ತ ಸೆ.7ರಂದು ಧಾರ್ಮಿಕ ಸಮಾರಂಭ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಟಿ. ಬಸವರಾಜ್ ತಿಳಿಸಿದರು.
ಚಿತ್ರದುರ್ಗದ ಶ್ರೀ ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸುವರು. ಕಣ್ವಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಉಪದೇಶಾಮೃತ ನೀಡುವರು.
ಶಾಸಕಡಾ.ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ, ಶಿವಾನಂದ ಕಾಪಶಿ, ಎಸ್ಪಿ ಸಿ.ಬಿ.ರಿಷ್ಯಂತ್, ಮೇದಾರ ಕೇತೇಶ್ವರ ಟ್ರಸ್ಟ್ ಅಧ್ಯಕ್ಷ ಸಿ.ಪಿ.ಪಾಟೀಲ್, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ರಾಜ್ಯ ನಿರ್ದೇಶಕ ಪಿ.ಎಸ್. ಕಾಂತರಾಜ್, ಉಪನಿರ್ದೇಶಕ ಎಂ.ಎಚ್. ಸುರೇಶರೆಡ್ಡಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ಜಿ.ಎಸ್. ಮಂಜುನಾಥ ನಾಯ್ಕ, ಹಾಲಿಕೆ ಸದಸ್ಯ ಶಿವಪ್ರಕಾಶ್ ಭಾಗವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೆ.8ರಂದು ಸಂಜೆ 6 ಗಂಟೆಗೆ ಅವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಶ್ರೀಗಳ ಸಾನ್ನಿಧ್ಯದಲ್ಲಿ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕಾರ ಹಾಗೂ ಹೆಣ್ಣು ಮಕ್ಕಳಿಗೆ ಅರಿಶಿಣ- ಕುಂಕುಮ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು. ಬಿದಿರು, ಗಳ, ಬೊಂಬಿನಿಂದಲೆ 55 ಅಡಿ ಎತ್ತರ, 45 ಅಡಿ ಉದ್ದ ಹಾಗೂ 30 ಅಡಿ ಅಗಲ ವಿಸ್ತೀರ್ಣದ, ಸುಂದರವಾದ ಕೇದಾರನಾಥ ದೇವಾಲಯವನ್ನು ನಿರ್ಮಿಸಲಾಗಿದೆ. ಸೆ.9ರವರೆಗೆ ಸಾರ್ವಜನಿಕರು ವೀಕ್ಷಿಸಬಹುದು ಎಂದರು.
ಸುದ್ದಿಗೋಷ್ಠಿಯಲ್ಲಿ ಅವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಸಂಘದ ಉಪಾಧ್ಯಕ್ಷ ಎಂ.ತಿಮ್ಮಣ್ಣ, ಕಾರ್ಯದರ್ಶಿ ಕೆ.ಹನುಮಂತಪ್ಪ, ಖಜಾಂಚಿ ಯು.ಗಿರೀಶ್, ಕೆ.ನಾಗರಾಜ್, ಎಂ.ಟಿ. ನಾಗರಾಜ್ ಇದ್ದರು.