ಧಾರ್ಮಿಕ ಕಾರ್ಯಕ್ರಮಗಳಿಂದ ನೆಮ್ಮದಿ ಪ್ರಾಪ್ತಿ

ಬಾಗೂರು ಹೋಬಳಿ ವ್ಯಾಪ್ತಿಯ ಕಾಳುಮಾರನಹಳ್ಳಿಪುರ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವಾಲಯದ ಉದ್ಘಾಟನಾ ಶಿಲಾಮೂರ್ತಿ ಪ್ರತಿಷ್ಠಾಪನೆಯ ಧಾರ್ಮಿಕ ಸಮಾರಂಭದಲ್ಲಿ ಬಿಜೆಪಿ ಮುಖಂಡ ಎ.ಸಿ. ಆನಂದ್‌ಕುಮಾರ್ ಅವರನ್ನು ದೇವಾಲಯ ಸಮಿತಿ ಸದಸ್ಯರು ಸನ್ಮಾನಿಸಿದರು.
IMG_20221030_131649
Published on

ಬಾಗೂರು: ಹಳ್ಳಿಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಎಲ್ಲರೂ ಒಗ್ಗಟ್ಟಾಗಿ ಮಾಡುವುದರಿಂದ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ತಾಲೂಕು ಬಿಜೆಪಿ ಮುಖಂಡ ಎ.ಸಿ. ಆನಂದ್‌ಕುಮಾರ್ ತಿಳಿಸಿದರು.


ಹೋಬಳಿ ವ್ಯಾಪ್ತಿಯ ಕಾಳುಮಾರನಹಳ್ಳಿಪುರ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಬಸವೇಶ್ವರಸ್ವಾಮಿ ದೇವಾಲಯದ ಉದ್ಘಾಟನೆ, ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಶಿಖರ ಕಳಸ ಸ್ಥಾಪನೆಯ ಮಹೋತ್ಸವದ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದರು. ಹಳ್ಳಿಗಳ ಅಭಿವೃದ್ಧಿಗೆ ರಾಜಕೀಯ ದ್ವೇಷ ಬೇಕಾಗಿಲ್ಲ. ಗ್ರಾಮಸ್ಥರು ಒಗ್ಗಟ್ಟಾಗಿರುವುದರಿಂದ 15 ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿದ್ದ ದೇವಾಲಯವನ್ನು ಜೀರ್ಣೋದ್ಧಾರ ಮಾಡಿರುವುದು ಸಂತಸ ತಂದಿದೆ ಎಂದರು.
ಸಮಾರಂಭದಲ್ಲಿ ಗ್ರಾಪಂ ಅಧ್ಯಕ್ಷ ಶಿವಯ್ಯ, ಕೆ.ಎನ್.ರಾಜು, ರವಿ, ಕೃಷ್ಣೇಗೌಡ, ಸೋಮೇಗೌಡ, ಶಂಕರೇಗೌಡ, ಲೋಕೇಶ್, ಬಾಬು, ಚಂದ್ರಶೇಖರ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net