ಧಾರ್ಮಿಕ ಸೇವೆ ದಾನ- ಧರ್ಮ ಅಜರಾಮರ

33333333
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮನುಷ್ಯ ಜೀವನದಲ್ಲಿ ಏನಾದರೊಂದು ಸಾಧಿಸಬೇಕು. ಇಲ್ಲದಿದ್ದರೆ ಮಾನವ ಜನ್ಮ ವ್ಯರ್ಥವಾಗುತ್ತದೆ. ಗಳಿಸಿದ ಹಣ, ಆಸ್ತಿ ಯಾವನ್ನೂ ನಮ್ಮೊಂದಿಗೆ ಕೊಂಡೊಯ್ಯುವುದಿಲ್ಲ. ಜೀವನಮಾನದಲ್ಲಿ ಮಾಡಿದ ಧಾರ್ಮಿಕ ಸೇವೆ, ದಾನ- ಧರ್ಮ ಸದಾ ಉಳಿಯುತ್ತವೆ ಎಂದು ಲಿಂಗನಾಯಕನಹಳ್ಳಿಯ ಶ್ರೀ ಚನ್ನವೀರ ಮಹಾಸ್ವಾಮೀಜಿ ಹೇಳಿದರು.
ಇಲ್ಲಿನ ಮೃತ್ಯುಂಜಯನಗರದ ಕೊಟ್ಟಣದ ಓಣಿಯ ಶ್ರೀ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಆಯೋಜಿಸಿದ್ದ ಆಶೀರ್ವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವೀರಭದ್ರೇಶ್ವರ ದೇವಸ್ಥಾನದ ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ, ಭಕ್ತಾದಿಗಳ ತನು- ಮನದ ಸೇವೆಯ ಲವಾಗಿ ಜಾತ್ರೆ 11 ವರ್ಷಗಳಿಂದ ವಿಜೃಂಭಣೆಯಿಂದ ಜರುಗುತ್ತಿದೆ ಎಂದರು.
ಮಾಜಿ ಶಾಸಕಿ ಸೀಮಾ ಮಸೂತಿ, ವೈಶುದೀಪ ೌಂಡೇಶನ್ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ, ಪಾಲಿಕೆ ಸದಸ್ಯ ನಿತಿನ್ ಇಂಡಿ ಮಾತನಾಡಿದರು.
ಮುರುಘಾಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಅಮ್ಮಿನಭಾವಿಯ ಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ, ಸುಳ್ಳದ ಶ್ರೀ ಶಿವಸಿದ್ಧರಾಮೇಶ್ವರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net