

ಮೈಸೂರು: ನಂಜನಗೂಡು ಪಟ್ಟಣದಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿ ಅಂಗಡಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ ಮೇಲೆ ದಾಳಿ ಮಾಡಲಾಗಿದ್ದು, 55 ಪ್ರಕರಣಗಳಲ್ಲಿ 6,600 ರೂ. ದಂಡ ವಸೂಲಿ ಮಾಡಲಾಗಿದೆ.
ತಹಸೀಲ್ದಾರ್(ಗ್ರೇಡ್-2) ಭೈರಯ್ಯ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ. ಈಶ್ವರ್ ಬಿ. ಕನಾಟ್ಕಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪ್ರಭಾರಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸಜ್ಜನ್ ರಾವ್ ಬೋಬಡೆ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.