ಧೈರ್ಯದಿಂದ ಪರೀಕ್ಷೆ ಎದುರಿಸಿ

21kolavi2
Published on

ಕೊಳವಿ: ಸಮಚಿತ್ತದಿಂದ ಪುಸ್ತಕ ಓದುವ ಮೂಲಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಬಹುದು. ಪರೀಕ್ಷೆ ಭಯದ ವಾತಾವರಣ ಮರೆತು ಧೈರ್ಯದಿಂದ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಬೇಕು ಎಂದು ಪಿಡಿಒ ಪಿ.ಎಸ್.ಹಾಸಲಕರ ಹೇಳಿದರು.

ಸಮೀಪದ ಮಕ್ಕಳಗೇರಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸರ್ಕಾರಿ ಪ್ರೌಢಶಾಲೆಯ ಪ್ರಸಕ್ತ ಸಾಲಿನ 10ನೆಯ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಶಿಕ್ಷಕ ಆರ್.ಎಂ.ಗುಡ್ಡೆನ್ನವರ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಬೇಕು ಎಂದು ಹಾರೈಸಿದರು. ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಅನುಕೂಲಕರವಾಗಲಿ ಎಂಬ ಉದ್ದೇಶದಿಂದ ಕನ್ನಡದ ನಂಬರ್ ಒನ್ ಪತ್ರಿಕೆ ವಿಜಯವಾಣಿಯ ‘ವಿದ್ಯಾರ್ಥಿ ಮಿತ್ರ’ ಪುರವಣಿ ಹೊರತಂದಿದೆ. ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಪ್ರಸಕ್ತ ಸಾಲಿನ ಕ್ರೀಡಾಪಟುಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಗ್ರಾಪಂ ಸದಸ್ಯ ಸುರೇಶ ಒಂಟಗುಡಿ, ಶಿಕ್ಷಕರಾದ ಆರ್.ಎ.ಕುಲಕರ್ಣಿ, ಬಿ.ಎನ್.ದೇಸಾಯಿ, ವಿ.ಎಸ್.ಕಟಗಿ, ಜಿ.ಎಸ್.ಪೊಲೀಸ್, ಎ.ವಿ.ದಳವಾಯಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net