ಧ್ರುವನಾರಾಯಣ್ ಅವರ ಸೇವೆ ಸ್ಮರಣೀಯ

11rajesh8
Published on

ಚಾಮರಾಜನಗರ: ಜಿಲ್ಲೆಯ ಅಭಿವೃದ್ಧಿಯ ಹರಿಕಾರ ಮಾಜಿ ಸಂಸದ ದಿ.ಆರ್.ಧ್ರುವನಾರಾಯಣ್ ಸೇವೆ ಸದಾಕಾಲವೂ ಸ್ಮರಣೀಯ ಎಂದು ಕಾಡಾ ಅಧ್ಯಕ್ಷ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.

ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಆರ್.ಧ್ರುನಾರಾಯಣ್ ಅಭಿಮಾನಿಗಳ ಬಳಗದ ವತಿಯಿಂದ ಮಾಜಿ ಸಂಸದ ದಿ.ಆರ್.ಧ್ರುವನಾರಾಯಣ್ 2ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಆಯೋಜಿಸಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ 2 ಬಾರಿ ಸಂಸದರಾಗಿ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳು ಇಂದಿಗೂ ಕಣ್ಣಿಗೆ ಕಾಣಿಸುತ್ತದೆ. ಅವರ ಸೇವಾಮನೋಭಾವದಿಂದಲೇ ಇಂದಿಗೂ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅವರನ್ನು ಗೌರವಿಸುತ್ತಿದ್ದಾರೆ. ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ರೀತಿ ಪ್ರತಿಯೊಬ್ಬ ರಾಜಕಾರಣಿಗಳಿಗೂ ಅನುಕರಣೀಯ ಎಂದರು.

ಈ ಸಂದರ್ಭದಲ್ಲಿ ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಎಪಿಎಂಸಿ ಸದಸ್ಯ ಆಲೂರು ಪ್ರದೀಪ್, ನಗರಸಭೆ ಸದಸ್ಯೆ ಚಿನ್ನಮ್ಮ, ಮುಖಂಡ ಶಿವಮೂರ್ತಿ, ಕೆ.ಎಂ.ನಾಗರಾಜು, ಕಾಗಲವಾಡಿ ಚಂದ್ರು, ರಾಮಸಮುದ್ರ ರಾಜಪ್ಪ, ಡಾ.ಕುಮಾರ್ ಚಿಕ್ಕಹೊಳೆ, ಅಕ್ಷಯ್ ಕುಮಾರ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net