

ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ನ.1 ರಂದು ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿ ಬಳಿಕ ರಾಜ್ಯೋತ್ಸವದ ಸಂದೇಶ ನೀಡುವರು. ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರು ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್.ಸುರೇಶ್, ಚುಡಾ ಮಹಮ್ಮದ್ ಅಸ್ಗರ್ (ಮುನ್ನ), ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ನಗರಸಭೆ ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಲೋಕೇಶ್ವರಿ ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.