ಚಾಮರಾಜನಗರ: ಕನಸು ಸಾಂಸ್ಕೃತಿಕ ಟ್ರಸ್ಟ್ ಮತ್ತು ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಸಹಯೋಗದಲ್ಲಿ ನ.10 ರಂದು ಸಾಂಸ್ಕೃತಿಕ ರಂಗಭೂಮಿ ಕಾರ್ಯಾಗಾರ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.
ತಾಲೂಕಿನ ಸಿದ್ದಯ್ಯನಪುರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಸಂಜೆ 5 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮವನ್ನು ಕೊಳ್ಳೇಗಾಲ ಚೇತನವನ ಬುದ್ಧ ವಿಹಾರದ ಮನೋರಖ್ಖಿತ ಬಂತೇಜಿ ಉದ್ಘಾಟಿಸುವರು.ಸಾಹಿತಿ ಡಾ.ಬಿ.ಆರ್.ಕೃಷ್ಣಕುಮಾರ್ ಮುಖ್ಯಭಾಷಣ ಮಾಡುವರು. ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಬಿ.ಜಯರಾಮ್, ಅಂಬೇಡ್ಕರ್ ಸಂಘದ ಅಧ್ಯಕ್ಷ ಎಚ್.ಮಹೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ನಾಟಕ, ರಂಗಗೀತೆ, ಹೋರಾಟಗೀತೆ ಮತ್ತು ವಿವಿಧ ನೃತ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷೆ ಪುಷ್ಪಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.