ನ. 10ರಂದು ವಿವಿದ ಹುದ್ದೆಗಳಿಗೆ ನೇರ ಸಂದರ್ಶನ

Application
Published on

ಚಾಮರಾಜನಗರ: ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನ್ಯೂರಾಲಜಿಸ್ಟ್/ಫಿಜಿಷಿಯನ್/ವೈದ್ಯಕೀಯ ಅಧಿಕಾರಿ, ಫಿಜಿಯೋಥೆರಪಿಸ್ಟ್, ಸ್ಪೀಚ್ ಥೆರಪಿಸ್ಟ್ ತಲಾ ಒಂದು ಹುದ್ದೆಗಳಿಗೆ ನ.10ರಂದು ನೇರ ಸಂದರ್ಶನ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ.

ನೇರ ಸಂದರ್ಶನವನ್ನು ನ.10ರಂದು ಬೆಳಗ್ಗೆ 10 ಗಂಟೆಗೆ ಚಾಮರಾಜನಗರದ ಜಿಲ್ಲಾಡಳಿತ ಭವನದ 3ನೇ ಮಹಡಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ (ಕೊಠಡಿ ಸಂಖ್ಯೆ 312) ಮೂಲಕ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಚಾಮರಾಜನಗರ (ದೂ.ಸಂ 08226-224889) ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net