ನ. 15, 16ರಂದು ಜಂಪ್ ರೋಪ್ ಪಂದ್ಯಾವಳಿ

Published on

ಚಾಮರಾಜನಗರ: ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾಲೇಜುಗಳ ಎರಡು ದಿನಗಳ ರಾಜ್ಯಮಟ್ಟದ ಜಂಪ್ ರೋಪ್ ಪಂದ್ಯಾವಳಿಯನ್ನು ನ.15 ಮತ್ತು 16ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಪಂದ್ಯಾವಳಿಯ ಉದ್ಘಾಟನೆ ಕಾರ್ಯಕ್ರಮವನ್ನು ನ.15ರಂದು ಬೆಳಿಗ್ಗೆ 10 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿರುವ ರಾಜ್ಯಮಟ್ಟದ ಜಂಪ್ ರೋಪ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಬಾಲಕಿಯರಿಗೆ ನಗರದ ಜೆ.ಎಸ್.ಎಸ್. ಮಹಿಳಾ ಪದವಿ ಪೂರ್ವ ಕಾಲೇಜು ಹಾಗೂ ಬಾಲಕರಿಗೆ ನಗರದ ಶಂಕರಪುರ ರಸ್ತೆಯಲ್ಲಿರುವ ಸೇವಾ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಉಪನಿರ್ದೇಶಕ ಸಿ. ಮಂಜುನಾಥ ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net