ನ. 19ರಂದು ಇಂಧನ ಸಚಿವರ ಜಿಲ್ಲಾ ಪ್ರವಾಸ

Published on

ಚಾಮರಾಜನಗರ: ಇಂಧನ ಸಚಿವ ಕೆ.ಜೆ ಜಾರ್ಜ್ ನ.19ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡುವರು.

ಬೆಳಗ್ಗೆ 11.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಕೆ.ಡಿ.ಪಿ ಸಭಾಂಗಣದಲ್ಲಿ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net