ನ. 19ರಂದು ಮಾದಕ ವ್ಯಸನ ಅರಿವು ಕಾರ್ಯಕ್ರಮ

Published on

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನೆಹರು ಯುವ ಕೇಂದ್ರ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಹಾಗೂ ಜೆ.ಎಎಸ್.ಎಸ್ ಸ್ಕೂಲ್ ಆಫ್ ನರ್ಸಿಂಗ್ ಇವರ ಸಹಯೋಗದಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವ್ಯಸನದ ಅರಿವು ಕಾರ್ಯಕ್ರಮವನ್ನು ನ.19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಸ್.ಎಸ್ ಗ್ರಂಥಾಲಯದ ಪಕ್ಕದಲ್ಲಿರುವ ಜೆ.ಎಎಸ್.ಎಸ್ ಸ್ಕೂಲ್ ಆಫ್ ನರ್ಸಿಂಗ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಕಾರ್ಯಕ್ರಮ ಉದ್ಘಾಟಿಸುವರು. ಜೆ.ಎಸ್.ಎಸ್ ಸ್ಕೂಲ್ ಆಫ್ ನರ್ಸಿಂಗ್ ನ ಪ್ರಾಂಶುಪಾಲ ಜಿ.ವಿನಯಕುಮಾರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ, ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಡಾ. ಕೆ.ಬಿ ಅಭಿಷೇಕ್, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ.ಬಂಗಾರು, ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಅಭಿಷೇಕ್ ಚವರೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net