ನ.1ರೊಳಗೆ ಕನ್ನಡ ನಾಮಲಕ ಅಳವಡಿಕೆ ಕಡ್ಡಾಯ

DC shilpa nag 02
Published on

ಚಾಮರಾಜನಗರ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024ರ ಅನ್ವಯ ಜಿಲ್ಲಾ ವ್ಯಾಪ್ತಿಯಲ್ಲಿ ಪರವಾನಗಿ(ಅನುಮತಿ) ಪಡೆದು ನಡೆಸುವ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳು, ಎಲ್ಲ ರೀತಿಯ ಸಾರ್ವಜನಿಕ ಹಾಗೂ ಖಾಸಗಿ ಸಂಘ-ಸಂಸ್ಥೆಗಳು ನಾಮಫಲಕಗಳಲ್ಲಿನ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಮಾಡದೇ ಇದ್ದಲ್ಲಿ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಕೈಗಾರಿಕೆ, ಅಂಗಡಿ ಮುಂಗಟ್ಟು, ವಾಣಿಜ್ಯ ಸಂಸ್ಥೆ, ಶಿಕ್ಷಣ ಸಂಸ್ಥೆ ಸೇರಿದಂತೆ ಇನ್ನಿತರ ಉದ್ಯಮ ಸಂಘ-ಸಂಸ್ಥೆಗಳ ಪರವಾನಗಿಯನ್ನು ರದ್ದುಪಡಿಸಲಾಗುತ್ತದೆ. ನ.1ರೊಳಗಾಗಿ ನಾಮಫಲಕಗಳ ಮೇಲ್ಭಾಗದಲ್ಲಿ ಶೇ. 60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net