ನ.24ರಂದು ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ

Published on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 11 ಕೆವಿ ಫೀಡರ್‌ಗಳಲ್ಲಿ ತುರ್ತು ಕಾಮಗಾರಿಯನ್ನು ನ. 24ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಚಾಮರಾಜನಗರ ಪಟ್ಟಣದ ವಿವಿಧ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ರಾಮಸಮುದ್ರ, ಹೌಸಿಂಗ್ ಬೋರ್ಡ್, ಕರಿನಂಜನಪುರ, ಶಂಕರಪುರ, ಬಿ. ರಾಚಯ್ಯ ಜೋಡಿರಸ್ತೆ, ಕಾರಾಗೃಹ, ಕಾರಾಗೃಹದ ಹಿಂಭಾಗ, ನ್ಯಾಯಾಲಯದ ರಸ್ತೆ ಮತ್ತು ಜಿಲ್ಲಾಧಿಕಾರಿಗಳ ವಸತಿಗೃಹ ಹಾಗೂ ಸುತ್ತಲಿನ ಪ್ರದೇಶಗಳು, ವಿದ್ಯಾನಗರ, ಚೆನ್ನಿಪುರ ಮೋಳೆ, ವಿ.ಹೆಚ್.ಪಿ ಶಾಲೆ ಹತ್ತಿರ, ಜಿಲ್ಲಾಧಿಕಾರಿಗಳ ಕಚೇರಿ, ಭ್ರಮರಾಮಭ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರಧೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net