ನ.2ರಂದು ಕಲ್ಪ ಪ್ರಯೋಗಾಲಯ ಉದ್ಘಾಟನೆ

ನ.2ರಂದು ಕಲ್ಪ ಪ್ರಯೋಗಾಲಯ ಉದ್ಘಾಟನೆ
Published on

ಹಾಸನ: ಜಿಲ್ಲೆಯ ವಿದ್ಯಾರ್ಥಿಗಳ ದೃಷ್ಟಿಯಿಂದ ನಾವ್ ಕಿಸ್ ಕಾಲೇಜಿನಲ್ಲಿ ಎಂಸಿಎ ಹೊಸ ಕೋರ್ಸ್ ಆರಂಭಿಸಲಾಗಿದು,್ದ ಇದರ ಜೊತೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲ್ಪ ಪ್ರಯೋಗಾಲಯ ಉದ್ಘಾಟನೆಯನ್ನು ನ.2ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾಕ್ಟರ್ ಎಚ್.ಎಸ್.ಮೋಹನ್ ತಿಳಿಸಿದರು.

ನಾವ್ ಕಿಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದ್ದು, ಸಂಸ್ಥೆಯಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನ ಒಳಗೊಂಡಿದೆ. ಮಕ್ಕಳಿಗೆ ಭವಿಷ್ಯದಲ್ಲಿ ಉದ್ಯೋಗ ರೂಪಿಸುವ ನಿಟ್ಟಿನಲ್ಲಿ ಸಾಕಷ್ಟು ಶ್ರಮವಹಿಸಿ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಈ ವರ್ಷದಿಂದ ಹೊಸ ಕೋರ್ಸ್ ಆರಂಭಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಲ್ಪ ಪ್ರಯೋಗಾಲಯವನ್ನು ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಉಪಕುಲಪತಿ ಚಿದಾನಂದ ಗೌಡ ಉದ್ಘಾಟನೆ ನೆರವೇರಿಸಲಿದ್ದು, ಹಲವು ಗಣ್ಯರು ಆಗಮಿಸಲಿದ್ದಾರೆ. ಇದು ಪ್ರತಿಯೊಬ್ಬ ಮಕ್ಕಳಿಗೆ ಸಾಕಷ್ಟು ಅನುಕೂಲವಾಗುವುದರ ವಾತಾವರಣವನ್ನು ನಿರ್ಮಾಣ ಮಾಡಲಿದೆ ಎಂದು ಹೇಳಿದರು

ನಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಉದ್ಯೋಗದ ಅವಕಾಶಗಳಿಗೆ ಕ್ಯಾಂಪಸ್ ಸೆಲೆಕ್ಷನ್, ಕೌಶಲ್ಯ ತರಬೇತಿಗಳನ್ನು ಕೂಡ ನೀಡಲಾಗುತ್ತಿದೆ. ಈಗಾಗಲೇ ಅನೇಕ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಹಾಗೂ ವಿದೇಶದಲ್ಲಿ ಹಲವು ಉದ್ಯೋಗವನ್ನ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ನಾವ್ ಕಿಸ್ ಕಾಲೇಜ್ ಆಫ್ ಇಂಜಿನಿಯರಿಂಗ್‌ನ ಉಪ ಪ್ರಾಂಶುಪಾಲ ಡಾ. ಮೈನಾ, ರಮೇಶ್ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net