ಚಾಮರಾಜನಗರ: ಶಾಲಾ ಶಿಕ್ಷಣ ಇಲಾಖೆಯಿಂದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವನ್ನು ನ.4 ಹಾಗೂ 5 ರಂದು ನಗರದ ಡಾ. ಬಿ. ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಸುಮಾರು 400 ಕ್ರಿಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.