

ಮೈಸೂರು: ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರ ಸಂಘದ ವತಿಯಿಂದ 27ನೇ ವಾರ್ಷಿಕ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವನ್ನು ನ.6 ರಂದು ಬೆಳಗ್ಗೆ 10.30ಕ್ಕೆ ನಗರದ ಕಲಾಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ.
ಭಗೀರಥ ಪೀಠದ ಶ್ರೀ ಡಾ.ಪುರುಷೋತ್ತಮಾನಂದಪುರಿ ಸ್ವಾಮಿ ಹಾಗೂ ಅಯ್ಯನ ಸರಗೂರು ಮಠದ ಶ್ರೀ ಮಹದೇವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಧಾರವಾಡದ ಕ್ಲಾಸಿಕ್ ಎಜುಕೇಶನ್ ಪ್ರೈ.ಲಿ. ನಿರ್ದೇಶಕ ಲಕ್ಷ್ಮಣ್ ಉಪ್ಪಾರ್ ಕಾರ್ಯಕ್ರಮ ಉದ್ಘಾಟಿಸುವರು.
ಶಾಸಕ ಸಿ.ಪುಟ್ಟರಂಗಶೆಟ್ಟಿ, ನಿವೃತ್ತ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜವರಶೆಟ್ಟಿ ಸೇರಿದಂತೆ ಇನ್ನಿತರರು ಪಾಲ್ಗೊಳ್ಳುವರು ಎಂದು ಸಂಘದ ಸಲಹೆಗಾರ ಜಗನ್ನಾಥ್ ಸಾಗರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.