ಬಿಎಂಎಸ್‌ಆರ್‌ಎ ಕಾಸರಗೋಡು ಜಿಲ್ಲಾ ಸಮ್ಮೇಳ

New Project (13)
Published on

ಕಾಸರಗೋಡು: ಬಿ.ಎಂ.ಎಸ್.ಆರ್.ಎ. ಕಾಸರಗೋಡು ಜಿಲ್ಲಾ ವಾರ್ಷಿಕ ಸಮ್ಮೇಳನ ಕಾಸರಗೋಡಿನ ಹೊಸ ಬಸ್ ನಿಲ್ದಾಣದ ಬಳಿ ಆರ್.ಕೆ.ಮಾಲ್‌ನಲ್ಲಿ ಜರುಗಿತು. ಬೆಳಗ್ಗೆ ಧ್ವಜಾರೋಹಣ ನಡೆಯಿತು.

ಬಿಎಂಎಸ್ ರಾಜ್ಯ ಉಪಾಧ್ಯಕ್ಷ ಸುರೇಶ್ ಕುಮಾರ್ ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಕಾಸರಗೋಡು ಜಿಲ್ಲಾಧ್ಯಕ್ಷ ಹರಿಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಬಿಎಂಎಸ್ ಜಿಲ್ಲಾಧ್ಯಕ್ಷ ಉಪೇಂದ್ರ ಕೊಟಕಣಿ, ಬಿಎಂಎಸ್ ಕಾಸರಗೋಡು ಪ್ರಾದೇಶಿಕ ಕಾರ್ಯದರ್ಶಿ ಬಾಬುಮೋನ್, ಬಿಎಂಎಸ್ ರಾಜ್ಯ ಸಮಿತಿ ಕಾರ್ಯದರ್ಶಿ ಮನೇಶ್ ಬಿ. ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ಅರುಣ್ ಕೆ.ವಿ.ಬಾಬು ಮುಖ್ಯ ಭಾಷಣ ಮಾಡಿದರು. ಜಿಲ್ಲಾ ಉಪಾಧ್ಯಕ್ಷ ಅನಿಲ್ ಕುಮಾರ್, ಕೋಶಾಧಿಕಾರಿ ಅರುಣ್ ವರದಿ ಮಂಡಿಸಿದರು. ಜಿಲ್ಲಾ ಪ್ರಭಾರಿ ಜೈದೀಪ್ ಕಣ್ಣೂರು ಸಂಘಟನಾ ಚರ್ಚೆ ಮತ್ತು ಜಿಲ್ಲಾ ಪದಾಧಿಕಾರಿಗಳ ಚುನಾವಣೆ ನಡೆಸಿಕೊಟ್ಟರು. ನೂತನ ಜಿಲ್ಲಾಧ್ಯಕ್ಷರಾಗಿ ಹರಿಪ್ರಸಾದ್ ಕೆ., ಕಾರ್ಯದರ್ಶಿಯಾಗಿ ತೇಜಸ್ ಕೆ., ಕೋಶಾಧಿಕಾರಿಯಾಗಿ ಅರುಣ್ ಬಿ.ಅವರನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾ ಕಾರ್ಯದರ್ಶಿ ತೇಜಸ್ ಸ್ವಾಗತಿಸಿದರು. ಬಿ.ಎಂ.ಎಸ್.ಆರ್.ಎ. ಜಿಲ್ಲಾ ಜತೆ ಕಾರ್ಯದರ್ಶಿ ಸಂದೀಪ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net