

ಬಾಗಲಕೋಟೆ: ಜಿಲ್ಲೆಯಲ್ಲಿ ನ.೧೭ ರಂದು ಜರುಗಲಿರುವ ರಾಜ್ಯ ಮಟ್ಟದ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ ಹೇಳಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸಹಕಾರ ಸಪ್ತಾಯ ದಿನಾಚರಣೆ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರು, ರಾಜ್ಯದ ಗಣ್ಯ ವ್ಯಕ್ತಿಗಳು, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು, ರಾಜ್ಯದ ಹಿರಿಯ ಸಹಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಿ ಯಶಸ್ವಿಗೊಳಿಸುವಂತೆ ಅಽಕಾರಿಗಳಿಗೆ ಸೂಚಿಸಿದರು.
ಹುಬ್ಬಳ್ಳಿ ಬೈಪಾಸ್ ರಸ್ತೆ, ಜಿಲ್ಲಾ ಪಶು ಆಸ್ಪತ್ರೆಯ ಎದುರಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಗ್ಯಾರಂಟಿ ಯೋಜನೆಯ ಫಲಾನುಭವಿಗಳು, ವಿವಿಧ ಸಹಕಾರ ಸಂಘಗಳ ಸಹಕಾರಿಗಳು ಆಗಮಿಸಲಿದ್ದಾರೆ. ಎಲ್ಲರಿಗೂ ಆಸನಗಳ ವ್ಯವಸ್ಥೆ ಮಾಡಲು ತಿಳಿಸಿದರು. ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳ ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವ ಕೆಲಸವಾಗಬೇಕು ಎಂದರು.
ವೇದಿಕೆ ಪಕ್ಕದಲ್ಲಿ ೫ ಗ್ಯಾರಂಟಿ ಯೋಜನೆಗಳಿಗೆ ಸಂಬಂಽಸಿದ ಹಾಗೂ ವಿವಿಧ ಇಲಾಖೆ ಸೇರಿದಂತೆ ೧೫ಕ್ಕೂ ಹೆಚ್ಚು ವಸ್ತು ಪ್ರದರ್ಶನ ಮಳಿಗೆ ಹಾಕುವ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನಲೆಯಲ್ಲಿ ವಿವಿಧ ಇಲಾಖೆಯ ಅಽಕಾರಿಗಳು ತಮ್ಮ ಇಲಾಖೆಗೆ ಸಂಬಂಽಸಿದ ಪ್ರಗತಿಯ ಮಾಹಿತಿಯ ವರದಿ ತಮ್ಮ ಬಳಿ ಇರಬೇಕು. ವೇದಿಕೆ ನಿರ್ಮಾಣದ ಕಾರ್ಯವನ್ನು ಸಹಕಾರ ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಜವಾಬ್ದಾರಿಯಾಗಿದ್ದು, ಅಚ್ಚುಕಟ್ಟಾಗಿ ವೇದಿಕೆ ನಿರ್ಮಿಸಲು ತಿಳಿಸಿದರು.
ಸಹಕಾರ ಇಲಾಖೆಯ ಉಪನಿಬಂಧಕ ದಾನಯ್ಯ ಹಿರೇಮಠ ಅವರು ಕಾರ್ಯಕ್ರಮದ ರೂಪುರೇಷೆಗಳ ಮಾಹಿತಿಯನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಽಕಾರಿ ಸಂತೋಷ ಜಗಲಾಸರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಽಕಾರಿಗಳು, ತಹಸೀಲ್ದಾರರು ಉಪಸ್ಥಿತರಿದ್ದರು.